ವಿಜಯವಾಣಿ ಸುದ್ದಿಜಾಲ ಧಾರವಾಡ
ಉಪ ರಾಷ್ಟçಪತಿ ಜಗದೀಪ ಧನಕರ್ ಅವರು ಫೆ. 7ರಂದು ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ನವದೆಹಲಿಯಿಂದ ಹೊರಡುವ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ರಾಣಿಬೆನ್ನೂರಗೆ ತೆರಳಿ ಅಲ್ಲಿನ ರಾಜೇಶ್ವರಿ ಮಹಾವಿದ್ಯಾಲಯದಲ್ಲಿ ಆಯೋಜಿಸಿರುವ ಕರ್ನಾಟಕ ವೈಭವದ ಸಾಹಿತ್ಯ ಮತ್ತು ಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ನವದೆಹಲಿಗೆ ಮರುಪ್ರಯಾಣ ಬೆಳಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.