ಎನ್.ಆರ್.ಪುರ: ಪಟ್ಟಣ ಪಂಚಾಯಿತಿ ಅಧ್ಯಕ್ಷೆಯಾಗಿ ಸುರೈಯ್ಯಬಾನು ಹಾಗೂ ಉಪಾಧ್ಯಕ್ಷರಾಗಿ ಎನ್.ಎಲ್.ಮುಕುಂದ ಅವಿರೋಧವಾಗಿ ಆಯ್ಕೆಯಾದರು.
11 ಸದಸ್ಯ ಬಲದ ಪಪಂನಲ್ಲಿ ಕಾಂಗ್ರೆಸ್ನಿಂದ 9 ಹಾಗೂ ಬಿಜೆಪಿಯಿಂದ ಆಯ್ಕೆಯಾಗಿದ್ದು, ಪಪಂ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಶನಿವಾರ ಚುನಾವಣೆ ನಡೆಯಿತು.
ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸುರೈಯ್ಯಬಾನು ಹಾಗೂ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಎನ್.ಎಲ್.ಮುಕುಂದ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ರೇಣುಕಾ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ಘೊಷಿಸಿದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ಪಪಂ ಚುನಾವಣೆಯಾಗಿ ಒಂದೂವರೆ ವರ್ಷದ ನಂತರ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆದಿದೆ. ಈ ಅವಧಿಯಲ್ಲಿ ಪಪಂ ಆಡಳಿತಾಧಿಕಾರಿಗಳು ಹಾಗೂ ಪಪಂ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದ್ದಾರೆ. ಇನ್ನು ಮುಂದೆಯೂ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಮಾತನಾಡಿ, ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆಗೆ ಪಪಂನ ಉಳಿದ ಸದಸ್ಯರು ಸಹಕಾರ ನೀಡಿದ್ದಾರೆ. ಅವರ ನಿರೀಕ್ಷೆ ಹುಸಿಯಾಗದಂತೆ ಪಟ್ಟಣದ ಅಭಿವೃದ್ಧಿಗೆ ಶ್ರಮಿಸಬೇಕು. ಮತದಾರರಿಗೆ ಹಾಗೂ ಪಕ್ಷಕ್ಕೆ ಚ್ಯುತಿ ಬಾರದಂತೆ ಸೇವೆ ಸಲ್ಲಿಸಬೇಕು ಎಂದು ಹೇಳಿದರು.
7 ಎನ್.ಆರ್.ಪಿ. 1
ಪಪಂ ನೂತನ ಅಧ್ಯಕ್ಷೆ, ಉಪಾಧ್ಯಕ್ಷರನ್ನು ಶಾಸಕ ಟಿ.ಡಿ.ರಾಜೇಗೌಡ ಹಾಗೂ ಪಕ್ಷದ ಕಾರ್ಯಕರ್ತರು ಅಭಿನಂದಿಸಿದರು. ಪಿ.ಆರ್.ಸದಾಶಿವ, ಗೇರ್ಬೈಲ್ನಟರಾಜ್, ಜುಬೇದಾ ಇದ್ದರು.