ಜಿಲ್ಲೆ

ಜ. 7ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಉಪ ರಾಷ್ಟ್ರಪತಿ ಜಿಲ್ಲೆಗೆ



ಮಂಗಳೂರು : ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಜ. 7ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ಹೊರಟು ಮಧ್ಯಾಹ್ನ 1.05 ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಬಳಿಕ ಹೆಲಿಕಾಪ್ಟರ್ ಮೂಲಕ
1.45 ಕ್ಕೆ ಧರ್ಮಸ್ಥಳ ಹೆಲಿಪ್ಯಾಡ್‌ಗೆ ಆಗಮನ. 2ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದರ್ಶನ, ಧರ್ಮಸ್ಥಳದಲ್ಲಿ ಮೆಗಾ ಕ್ಯೂ ಕಾಂಪ್ಲೆಕ್ಸ್ ಉದ್ಘಾಟನೆ ಮತ್ತು ಜ್ಞಾನದೀಪ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. 3.15ಕ್ಕೆ ಹೆಲಿಪ್ಯಾಡ್‌ನಿಂದ ನಿರ್ಗಮನ. 3.50ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ.