ಜಿಲ್ಲೆ

ಮುಂದಿನ ಚುನಾವಣೆಯಲ್ಲಿ ಗೆಲುವು ನಿಶ್ಚಿತ

Mysuru

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಬಲ ದಿನದಿಂದ ದಿನಕ್ಕೆ ವೃದ್ಧಿಯಾಗುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಕ್ಷೇತ್ರದ ನಿಕಟಪೂರ್ವ ಅಧ್ಯಕ್ಷ ಎನ್. ಅರುಣ್‌ಕುಮಾರ್‌ಗೌಡ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯಾದ್ಯಂತ ಬಿಜೆಪಿ ಹಮ್ಮಿಕೊಂಡಿರುವ ಬೂತ್ ವಿಜಯ ಸಂಕಲ್ಪ ಅಭಿಯಾನ ಸಂಬಂಧ ಚಾಮುಂಡೇಶ್ವರಿ ಕ್ಷೇತ್ರದ ವತಿಯಿಂದ ರಮ್ಮನಹಳ್ಳಿ ಗ್ರಾಮದಲ್ಲಿ ಭಾನುವಾರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.


ಬೂತ್ ಕಾರ್ಯಕರ್ತರು ಹಾಗೂ ಮುಖಂಡರು ಸಕ್ರಿಯವಾಗಿ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಕ್ಷೇತ್ರದಲ್ಲಿ ಗೆಲ್ಲುವ ಸಂಕಲ್ಪ ಮಾಡಬೇಕೆಂದು ಕರೆ ನೀಡಿದರು.
ರಾಜ್ಯಾದ್ಯಂತ ಇಂದಿನಿಂದ 9 ದಿನ ನಡೆಯುವ ಅಭಿಯಾನ ಇದಾಗಿದೆ. ಪ್ರತಿಯೊಂದು ಗ್ರಾಮದ ಬೂತ್‌ನಲ್ಲಿ ಮುಖಂಡರು ಹಾಗೂ ಬೂತ್ ಕಾರ್ಯಕರ್ತರು ಮನೆ ಮನೆ ಸಂಪರ್ಕ ಮಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಒಳಗೊಂಡ ಕರಪತ್ರವನ್ನು ನೀಡುವುದು ಹಾಗೂ ಸ್ಟಿಕ್ಕರ್ ಅಂಟಿಸುವುದು ಹಾಗೂ ಹೊಸ ಸದಸ್ಯರನ್ನು ಪಕ್ಷದ ಸದಸ್ಯರನ್ನಾಗಿ ನೋಂದಣಿ ಮಾಡುವ ಮೂಲಕ ಮತದಾರರಿಗೆ ಸರ್ಕಾರದ ಸಾಧನೆಗಳ ಮಾಹಿತಿ ನೀಡುವ ಅಭಿಯಾನವಾಗಿದೆ ಎಂದರು.

ಕ್ಷೇತ್ರದ ಬಿಜೆಪಿ ಅಧ್ಯಕ್ಷ ಗೆಜ್ಜಗಳ್ಳಿ ಮಹೇಶ್, ವಸ್ತುಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೇಮಂತ್‌ಕುಮಾರ್ ಗೌಡ, ಮಾಜಿ ಜಿಲ್ಲಾಧ್ಯಕ್ಷ ಹಾಗೂ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಎಸ್.ಡಿ.ಮಹೇಂದ್ರ, ಮಾಜಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಗೌಡ, ಜಿಲ್ಲಾ ಕಾರ್ಯದರ್ಶಿ ನಂದಕುಮಾರ್, ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಹಾಗೂ ಅಭಿಯಾನ ಸಂಚಾಲಕ ಪೈ. ರವಿ, ಪ್ರಧಾನ ಕಾರ್ಯದರ್ಶಿ ಈರಪ್ಪ, ಸಿದ್ದಲಿಂಗಪುರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಲೋಹಿತ್, ತಾಲೂಕು ಕಾರ್ಯದರ್ಶಿ ಶ್ರೀಕಂಠ, ಮಹಿಳಾ ಮೋರ್ಚಾ ಅಧ್ಯಕ್ಷೆ ಜ್ಯೋತಿ, ಗ್ರಾಮ ಪಂಚಾಯ್ತಿ ಸದಸ್ಯೆ ಪ್ರಮೀಳಾ ನಾಯಕ್ ಇತರರಿದ್ದರು.