ಹರಪನಹಳ್ಳಿ ತಾಲೂಕಿನ ಮೈದೂರು ಗ್ರಾಮದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕಾರ್ಯಕ್ರಮದಲ್ಲಿ ಶಾಸಕಿ ಎಂ.ಪಿ ಲತಾ ಮಲ್ಲಿಕಾರ್ಜುನ ಮಾತನಾಡಿದರು.
ಹರಪನಹಳ್ಳಿ: ಕ್ಷೇತ್ರದ ಜನರ ಆರೋಗ್ಯ ಮುಖ್ಯವಾಗಿದ್ದು, ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ನೇಮಕಕ್ಕೆ ಒತ್ತು ನೀಡಲಾಗಿದೆ. ಈ ಕುರಿತು ಸಚಿವರ ಬಳಿ ಚರ್ಚೆ ನಡೆಸಿದ್ದು ಸ್ಪಂದನೆ ದೊರೆತಿದೆ ಎಂದು ಶಾಸಕಿ ಎಂ.ಪಿ ಲತಾ ಮಲ್ಲಿಕಾರ್ಜುನ ಹೇಳಿದರು.
ಮೈದೂರು ಗ್ರಾಮದಲ್ಲಿ ಸಿ ಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಭಾನುವಾರ ಮಾತನಾಡಿದರು. ನರೇಗಾ ಯೋಜನೆಯನ್ನು ಸಮರ್ಪಕ ಬಳಸಿಕೊಂಡು ಕ್ಷೇತ್ರದಲ್ಲಿ 160 ಕೋಟಿ ವೆಚ್ಚದ ಕಾಮಗಾರಿ ಕೈಗೊಳ್ಳಲಾಗಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಸಾರ್ವಜನಿಕರು ಅಡ್ಡಿಪಡಿಸದೆ ಸಹಕಾರ ನೀಡಬೇಕು. ರಸ್ತೆಗಳು ಅಭಿವೃದ್ಧಿ ಕಂಡಲ್ಲಿ ಹೊಲಗಳ ಬೆಲೆ ಹೆಚ್ಚಳವಾಗಲಿದೆ ಎಂದರು.
ಕ್ಷೇತ್ರದ ಅಭಿವೃದ್ಧಿಗೆ ಮೂರು ಸಾವಿರ ಕೋಟಿ ರೂ. ತಂದಿದ್ದರೂ ಎಂ.ಪಿ.ರವೀಂದ್ರ ಸೋತಿದ್ದರು. ತಂದೆ ಎಂ.ಪಿ.ಪ್ರಕಾಶ್ ಹಾಗೂ ಸಹೋದರ ಎಂ.ಪಿ.ರವೀಂದ್ರ ಸೋಲು-ಗೆಲುವು ವಿಶ್ಲೇಸಿದರೆ ಮುಂಬರುವ ದಿನಗಳಲ್ಲಿ ಪಕ್ಷದ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂಜರಿಕೆ ಆಗುತ್ತಿದೆ ಎಂದು ತಿಳಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಅಂಜಿನಪ್ಪ, ಎಇಇ ಕುಬೇಂದ್ರನಾಯ್ಕ ಇತರರಿದ್ದರು.