ಹೊಸಪೇಟೆಯಲ್ಲಿ ಗುಡ್ಸ್ ವಾಹನ ನಿಯಂತ್ರಣ ತಪ್ಪಿ ಕಾಲುವೆಯ ತಡೆಗೊಡೆಗೆ ಡಿಕ್ಕಿ ಹೊಡೆದು ನಿಂತಿರುವುದು. 
ವಿಜಯನಗರ

ಕಾಲುವೆಯ ತಡೆಗೊಡೆಗೆ ಗುಡ್ಸ್ ವಾಹನ ಡಿಕ್ಕಿ

ಹೊಸಪೇಟೆ: ನಗರದ ಶ್ರೀ ಕೃಷ್ಣದೇವರಾಯ ವೃತ್ತದ ಬಳಿಯ ಬೈಪಾಸ್ ರಸ್ತೆಯಲ್ಲಿ ಗುಡ್ಸ್ ವಾಹನ ನಿಯಂತ್ರಣ ತಪ್ಪಿ ಕಾಲುವೆಯ ತಡೆಗೊಡೆಗೆ ಡಿಕ್ಕಿ ಹೊಡೆದ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಅದೃಷ್ಟವಶ ಯಾವುದೇ ಪ್ರಾಣಹಾನಿಯಿಲ್ಲ.
ಹುಬ್ಬಳ್ಳಿಯಿಂದ ಮದುವೆ ಮುಗಿಸಿ, ಕಮಲಾಪುರ ಕಡೆ ಹೊರಟಿದ್ದ ಗುಡ್ಸ್ ವಾಹನ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ವಾಹನದಲ್ಲಿ ಇದ್ದ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಗರದ ಸರ್ಕಾರಿ ಆಸ್ಪತ್ರೆಗೆ ಸ್ಥಳೀಯರ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.