ಹಗರಿಬೊಮ್ಮನಹಳ್ಳಿ ತಾಲೂಕಿನ ಬನ್ನಿಗೋಳದಲ್ಲಿ ಶ್ರೀ ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ನಿಮಿತ್ತ ಆಯೋಜಿಸಿದ್ದ ಧಾರ್ಮಿಕ ಸಮಾರಂಭವನ್ನು ಕೊಪ್ಪಳ ಗವಿಮಠದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ ಉದ್ಘಾಟಿಸಿದರು.
ಹಗರಿಬೊಮ್ಮನಹಳ್ಳಿ: ದೇಶದ ಭವಿಷ್ಯದ ಪ್ರಜೆಗಳಾಗಿರುವ ಯುವಕರು ಸುಸಂಸ್ಕೃತರಾಗಬೇಕೆಂದು ಕೊಪ್ಪಳ ಗವಿಮಠದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ ಹೇಳಿದರು.
ಬನ್ನಿಗೋಳ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಆಂಜನೇಯ ಸ್ವಾಮಿ ಸೇವಾ ಸಮಿತಿಯಿಂದ ಆಯೋಜಿಸಿದ್ದ ಧಾರ್ಮಿಕ ಸಮಾರಂಭದ ಸಾನ್ನಿಧ್ಯ ವಹಿಸಿ ಶುಕ್ರವಾರ ಮಾತನಾಡಿದರು. ಪಾಲಕರು ಮಕ್ಕಳಿಗಾಗಿ ಸಂಪತ್ತು ಗಳಿಸುತ್ತಾ ಹೋಗಬಾರದು. ಬದಲಾಗಿ ಗಳಿಸಿದ ಸಂಪತ್ತನ್ನು ಸನ್ಮಾರ್ಗದಲ್ಲಿ ಯಾವ ರೀತಿಯಾಗಿ ಬಳಸಬೇಕು ಎಂಬ ಸಂಸ್ಕೃತಿಯನ್ನು ಮಕ್ಕಳಿಗೆ ನೀಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಒಗ್ಗಟ್ಟು ಪ್ರದರ್ಶನಕ್ಕೆ ಇಂತಹ ಧಾರ್ಮಿಕ ಕಾರ್ಯಕ್ರಮಗಳು ಪೂರಕವಾಗಿವೆ ಎಂದರು.
ನಂದಿಪುರ ಮಠದ ಡಾ.ಮಹೇಶ್ವರ ಸ್ವಾಮೀಜಿ, ಹಂಪಸಾಗರದ ಶಿವಲಿಂಗ ರುದ್ರಮುನಿ ಸ್ವಾಮೀಜಿ, ಕಡಲಬಾಳು ಶಾಖಾ ಗವಿಮಠದ ಮರಿ ಶಾಂತವೀರ ಸ್ವಾಮೀಜಿ ಆಶೀರ್ವಚನ ನೀಡಿದರು. ಪ್ರಮುಖರಾದ ಮೂಲಿಮನಿ ರವಿಪ್ರಸಾದ್, ಹ್ಯಾಟಿ ಆನಂದ್ ರೆಡ್ಡಿ, ಮೈನಹಳ್ಳಿ ಕೊಟ್ರೇಶಪ್ಪ, ಶಿಕ್ಷಕ ವೆಂಕರೆಡ್ಡಿ, ಎಸ್.ಬಸವರೆಡ್ಡಿ, ಮಡಿವಾಳರ ಹನುಮಂತಪ್ಪ, ನಂದೆಪ್ಪನವರ ಸುರೇಶ್, ಈರುಳ್ಳಿ ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಗುಡ್ಡದ ಮೋಹನ್ ರೆಡ್ಡಿ, ನಿವೃತ್ತ ಮುಖ್ಯಶಿಕ್ಷಕ ಹುಗ್ಗಿ ಕೊಟ್ರೇಶ್, ಡಾ.ಅಂಜನಪ್ಪ ಗಡಾದ, ಎಂ.ಬಸವರಾಜ, ಎಂ.ಪಾರ್ಥ ಇತರರಿದ್ದರು.