ಕೂಡ್ಲಿಗಿಯಲ್ಲಿ ತಹಸೀಲ್ದಾರ್ ವಿ.ಕೆ.ನೇತ್ರಾವತಿಗೆ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಕೂಡ್ಲಿಗಿ: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಮುಷ್ಕರ ನಡೆಸಿ ಪ್ರಧಾನಿ ನರೇಂದ್ರ ಮೋದಿಗೆ ಬರೆದ ಮನವಿಯನ್ನು ತಹಸೀಲ್ದಾರ್ ವಿ.ಕೆ.ನೇತ್ರಾವತಿಗೆ ಗುರುವಾರ ಸಲ್ಲಿಸಲಾಯಿತು.
ಕೇಂದ್ರ ಸರ್ಕಾರವು 2025ರ ನ.21 ರಂದು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿದೆ. ಈ ನಾಲ್ಕು ಸಂಹಿತೆಗಳ ಮೂಲಕ ಕಾರ್ಮಿಕರು ದಶಕಗಳಿಂದ ಪಡೆದಿರುವ ಹಕ್ಕು ಹಾಗೂ ಸೌಲಭ್ಯಗಳನ್ನು ಕಿತ್ತುಕೊಳ್ಳಲಾಗಿದೆ. ನಿರ್ಮಾಣ ಕಾರ್ಮಿಕರು ನಿರಂತರ ಹೋರಾಟ ನಡೆಸಿದ ಪರಿಣಾಮ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಕಾನೂನು 1996 ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸೆಸ್ ಕಾನೂನು 1996 ಜಾರಿಗೊಂಡಿದ್ದವು. ಆದರೆ ಈಗ ಆ ಎರಡೂ ಕಾನೂನುಗಳು ರದ್ದಾಗಿರುವುದು ಕಾರ್ಮಿಕರಿಗೆ ಇನ್ನಿಲ್ಲದೆ ಸಮಸ್ಯೆ ಎದುರಾಗಿದೆ ಎಂದರು.