ಹಗರಿಬೊಮ್ಮನಹಳ್ಳಿಯಲ್ಲಿ ತಾಲೂಕು ಕನಕ ಯುವ ಸೇನೆ ಮತ್ತು ಕನಕ ನೌಕರರ ಸಂಘದ ಸಹಯೋಗದೊಂದಿಗೆ ಕುರುಬರ ಸಂಘದ ತಾಲೂಕು ಘಟಕದಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಹಗರಿಬೊಮ್ಮನಹಳ್ಳಿ: ವಿದ್ಯಾರ್ಥಿಗಳು ಉನ್ನತ ಶಿಕ್ಷಣದೊಂದಿಗೆ ಭವಿಷ್ಯ ರೂಪಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವಿಜಯನಗರ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ ಕರೆ ನೀಡಿದರು.
ತಾಲೂಕು ಕನಕ ಯುವ ಸೇನೆ ಮತ್ತು ಕನಕ ನೌಕರರ ಸಂಘದ ಸಹಯೋಗದೊಂದಿಗೆ ಕುರುಬರ ಸಂಘದ ತಾಲೂಕು ಘಟಕದಿಂದ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಭಾನುವಾರ ಮಾತನಾಡಿದರು. ಸಾಧನೆ ಬೇರೆಯವರ ಸ್ವತ್ತಲ್ಲ. ನಾನಾ ಸೌಲಭ್ಯಗಳನ್ನು ಬಳಸಿಕೊಂಡು ಸಾಧಿಸಬೇಕು ಎಂದರು.
ಉತ್ತಂಗಿ ಮಠದ ಸೋಮಶಂಕರ ಸ್ವಾಮೀಜಿ ಸಾನ್ನಿಧ್ಯ ವಹಿಸಿ, ಮಕ್ಕಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ನೀವು ಕರೆದಲ್ಲಿ ಬಂದು ಸಮುದಾಯದ ಏಳಿಗೆಗಾಗಿ ಜೋಳಿಗೆ ಹಿಡಿಯುವುದಾಗಿ ತಿಳಿಸಿದರು.
ಸಮಾಜದ ತಾಲೂಕು ಘಟಕದ ಮಾಜಿ ಅಧ್ಯಕ್ಷ ಬುಡ್ಡಿ ಬಸವರಾಜ ಮಾತನಾಡಿ, ಶಾಸಕ ಕೆ.ನೇಮಿರಾಜ್ ನಾಯ್ಕ ಮಾತು ಕೊಟ್ಟಂತೆ ಕನಕ ಭವನ ಮತ್ತು ವಿದ್ಯಾರ್ಥಿ ನಿಲಯಕ್ಕೆ ಒಂದು ಕೋಟಿ ರೂ.ಮಂಜೂರು ಮಾಡಿಸಿದ್ದಾರೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದರು.
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ನಂದಿಪುರ ಮಠದ ಡಾ.ಮಹೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಮಾಜದ ತಾಲೂಕು ಅಧ್ಯಕ್ಷ ಮೈನಳ್ಳಿ ಶಿವರಾಜ ಅಧ್ಯಕ್ಷತೆ ವಹಿಸಿದ್ದರು.
ಕುಲಗುರುಗಳಾದ ಕೊಟ್ರಯ್ಯ ಒಡೆಯರ್, ದೊಡ್ಡನಿಂಗಪ್ಪ, ಸಂಘದ ಮಾಜಿ ಅಧ್ಯಕ್ಷ ಮೈಲಾರಪ್ಪ, ನೌಕರರ ಸಂಘದ ತಾಲೂಕು ಅಧ್ಯಕ್ಷ ಮೈನಳ್ಳಿ ಮಂಜುನಾಥ, ಕನಕ ಯುವ ಸೇನೆ ಅಧ್ಯಕ್ಷ ಎಚ್.ಕೆ.ರಾಮು, ಕಸಾಪ ತಾಲೂಕು ಅಧ್ಯಕ್ಷ ಹುಲಿಮನಿ ಗೂಳೆಪ್ಪ, ಪ್ರಮುಖರಾದ ಕನ್ನಿಹಳ್ಳಿ ಚಂದ್ರಶೇಖರ್, ಪಿ.ಛತ್ರಪ್ಪ, ಫೋಟೋ ರಾಮಣ್ಣ, ಡಿ.ಶಿವಾನಂದಪ್ಪ, ಕೋಗಳಿ ಹನುಮಂತಪ್ಪ, ಜಳಿಕಿ ಗುರುಬಸಪ್ಪ, ನೇತ್ರಾನಂದಪ್ಪ, ಭಂಡಾರಿ ಭರಮಪ್ಪ, ಕೆ.ಕುಮಾರ, ದೇವೇಂದ್ರಪ್ಪ, ಡಾಬಾ ರಾಮಣ್ಣ, ಇಟ್ಟಿಗಿ ಕೊಟ್ರೇಶ, ಹೊಸಮನಿ ಮಂಜುನಾಥ, ನಿವೃತ್ತ ಶಿಕ್ಷಕ ದೇವಪ್ಪ ಮತ್ತಿತರರು ಇದ್ದರು.