ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಜಿಲ್ಲಾ ಮಟ್ಟದ ಬೀಜ, ರಸಗೊಬ್ಬರ ಮತ್ತು ಕೀಟನಾಶಕ ಜಾಗೃತಿ ಸಮಿತಿ ಸಭೆ ನಡೆಸಿದರು. ಜಿಪಂ ಸಿಇಒ ನೊಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ, ಎಎಸ್ಪಿ ಮಂಜುನಾಥ ಇದ್ದರು. 
ವಿಜಯನಗರ

ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ

ಪ್ರಮುಖ ಮುಖ್ಯಾಂಶಗಳು

  • ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಎಚ್ಚರಿಕೆ
ಹೊಸಪೇಟೆ: ಮುಂಗಾರು ಹಂಗಾಮಿನ ಬಿತ್ತನೆ ಚಟುವಟಿಕೆಗಳು ಜಿಲ್ಲೆಯಲ್ಲಿ ಚುರುಕುಗೊಂಡಿದ್ದು, ರೈತರಿಗೆ ಯಾವುದೇ ಕಾರಣಕ್ಕೂ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಕೊರತೆ ಉಂಟಾಗದAತೆ ನೋಡಿಕೊಳ್ಳಬೇಕು. ಒಂದು ವೇಳೆ ಕೃತಕ ಅಭಾವ ಸೃಷ್ಟಿಸುವ ಅಥವಾ ಎಂ.ಆರ್.ಪಿ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುವ ವರ್ತಕರ ಪರವಾನಗಿಯನ್ನು ತಕ್ಷಣವೇ ರದ್ದುಗೊಳಿಸಿ, ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಬೀಜ, ರಸಗೊಬ್ಬರ ಮತ್ತು ಕೀಟನಾಶಕ ಜಾಗೃತಿ ಸಮಿತಿ ಸಭೆಯಯಲ್ಲಿ ಮಾತನಾಡಿದರು. ರಸಗೊಬ್ಬರದ ಜತೆಗೆ ಅನಗತ್ಯ ಇತರೆ ಉತ್ಪನ್ನಗಳನ್ನು ಖರೀದಿಸುವಂತೆ ರೈತರ ಮೇಲೆ ಒತ್ತಡ ಹೇರುವ ದಂಧೆಯನ್ನು ಸಹಿಸುವುದಿಲ್ಲ ಎಂದರು. ಪಿಓಎಸ್ ಯಂತ್ರದ ಮೂಲಕ ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣದೊಂದಿಗೆ ಮಾತ್ರ ರಸಗೊಬ್ಬರ ವಿತರಿಸಬೇಕು ಎಂದು ತಾಕೀತು ಮಾಡಿದರು.
ಜಿಲ್ಲೆಯಲ್ಲಿ ಒಟ್ಟು 2,49,638 ಎಕರೆ ಬಿತ್ತನೆ ಗುರಿ ಹೊಂದಲಾಗಿದ್ದು, ಮಳೆ ಕೊರತೆಯಿಂದಾಗಿ ಈವರೆಗೆ ಶೇ.30 ರಷ್ಟು ಮಾತ್ರ ಪ್ರಗತಿಯಾಗಿದೆ. ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿ, ಜಿಲ್ಲೆಯಲ್ಲಿ 1,33,543 ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆ ಇದ್ದು, ಈಗಾಗಲೇ 74,538 ಮೆಟ್ರಿಕ್ ಟನ್ ದಾಸ್ತಾನು ಮಾಡಲಾಗಿದೆ. ಬೆಳೆ ಸಮೀಕ್ಷೆ ಮತ್ತು ವಿಮೆ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಪಾರದರ್ಶಕವಾಗಿ ಕೆಲಸ ಮಾಡಬೇಕು. ಲೋಪದೋಷ ಕಂಡುಬAದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಿದರು. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ನೋಂದಾಯಿಸಲು ಜೋಳ, ತೊಗರಿ, ಮುಸುಕಿನ ಜೋಳ, ಹತ್ತಿ, ಈರುಳ್ಳಿ ಬೆಳೆಗಳಿಗೆ ಜು.31 ಮತ್ತು ಭತ್ತ, ರಾಗಿ, ನೆಲಗಡಲೆ ಸೇರಿದಂತೆ ಇತರೆ ಬೆಳೆಗಳಿಗೆ ಆ.14 ಕೊನೆಯ ದಿನಾಂಕವಾಗಿದೆ ಎಂದರು.
ಜಿಪA ಸಿಇಒ ನೊಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ, ಎಎಸ್ಪಿ ಮಂಜುನಾಥ, ಕೃಷಿ ಇಲಾಖೆಯ ಉಪ ನಿರ್ದೇಶಕ ವಾಮದೇವಕೊಳ್ಳಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಪ್ರಭುರಾಜ್, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಜಿಲ್ಲಾ ಅಧಿಕಾರಿ ಪತ್ರಿಬಸಪ್ಪ, ಪಶು ಇಲಾಖೆ ಉಪನಿರ್ದೇಶಕ ಡಾ.ರವಿ ಇತರರಿದ್ದರು.