ಕೂಡ್ಲಿಗಿ:
ಹಾಸನ ಜಿಲ್ಲಾಧಿಕಾರಿ ವಿರುದ್ಧ ಅವಹೇಳನ ಹೇಳಿಕೆ ನೀಡಿರುವ ಶಾಸಕ ಎಚ್. ಡಿ.ರೇವಣ್ಣ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಶ್ರೀ ರಾಜ ವೀರ ಮದಕರಿ ನಾಯಕ (ವಾಲ್ಮೀಕಿ) ಕ್ಷೇಮಾಭಿವೃದ್ಧಿ ಸಂಘದಿಂದ ಶುಕ್ರವಾರ ತಹಸೀಲ್ದಾರ್ ವಿ.ಕೆ.ನೇತ್ರಾವತಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಶಾಸಕ ಎಚ್.ಡಿ.ರೇವಣ ಅವರು ಹಾಸನ ಡಿಸಿ ಕೆ.ಎಸ್.ಲತಾಕುಮಾರಿಗೆ ಅವಹೇಳನ ಮಾತುಗಳಿಂದ ನಿಂದಿಸಿರುವುದು ಖಂಡನೀಯ. ಕೂಡ್ಲಿಗಿ ತಾಲೂಕಿನ ಹಾಲಸಾಗರಟ್ಟಿ ಗ್ರಾಮದಲ್ಲಿ ಜನಿಸಿ ಬಡತನದಲ್ಲೇ ಐಎಎಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸಂವಿಧಾನಾತ್ಮಕವಾಗಿ ಜಿಲ್ಲಾಧಿಕಾರಿ ಹುದ್ದೆ ಅಲಂಕರಿಸಿದ ಲತಾಕುಮಾರಿಗೆ ನಿಂದಿಸಿರುವುದು ಸಮಾಜಕ್ಕೆ ಮಾಡಿರುವ ಅವಮಾನ. ತಕ್ಷಣ ಎಚ್.ಡಿ. ರೇವಣ್ಣ ಅವರು ಜಿಲ್ಲಾಧಿಕಾರಿಯುವರ ಕ್ಷಮೆ ಕೇಳಿ ತಮ್ಮ ತಪ್ಪನ್ನು ತಿದ್ದಿಕೊಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ನಾಯಕ ಸಮಾಜದಿಂದ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.