ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಸಿದರು. ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಎಎಸ್ಪಿ ಮಂಜುನಾಥ, ಉಪ ವಿಭಾಗಾಧಿಕಾರಿ ವಿವೇಕಾನಂದ, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ, ಡಿವೈಎಸ್ಪಿ ಪಿ.ಮುರಳೀಧರ ಇತರರಿದ್ದರು.
- ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚನೆ
ಹೊಸಪೇಟೆ: ರಾಷ್ಟ್ರೀಯ ಹೆದ್ದಾರಿ ರಸ್ತೆ ನಿರ್ಮಾಣ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ ವಾಹನ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುವ ಮೂಲಕ ಸಂಚಾರ ಕಿರಿಕಿರಿ ತಪ್ಪಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ವಲಯಗಳಿಂದ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ರಸ್ತೆ ನಿರ್ಮಾಣ ಕಾಮಗಾರಿಗಳಲ್ಲಿ ಭೂಸ್ವಾಧೀನ ಮತ್ತು ಅರಣ್ಯ ಇಲಾಖೆ ತೀರುವಳಿಗಳಿಗೆ ಸಂಬAಧಿಸಿದ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದರು.
ಹೆದ್ದಾರಿ ಕಾಮಗಾರಿ ಪ್ರಗತಿಗೆ ಇರುವ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಯಾವುದೇ ಗೊಂದಲ ಸಮಸ್ಯೆಗಳೂ ಇಲ್ಲ. ಆದರೂ ಕೆಲವೆಡೆ ಕಾಮಗಾರಿಗೆ ಹಿನ್ನೆಡೆಯಾಗುತ್ತಿರುವುದು ಸಾರ್ವಜನಿಕರಲ್ಲಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಹೆದ್ದಾರಿ ನಿರ್ಮಾಣವಾಗುತ್ತಿರುವ ಜಾಗಗಳಲ್ಲಿ ಕೆಲವೆಡೆ ಸಮರ್ಪಕ ಸರ್ವಿಸ್ ರಸ್ತೆಗಳಿಲ್ಲದೆ ಸ್ಥಳೀಯ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ಕೆಲವೆಡೆ ಸರ್ವಿಸ್ ರಸ್ತೆಗಳಿದ್ದರೂ ಸಹ ಅವೈಜ್ಞಾನಿಕವಾಗಿದ್ದು, ನೇರವಾಗಿ ಮುಖ್ಯ ರಸ್ತೆಗೆ ಸಂಪರ್ಕ ಹೊಂದಿಕೊAಡಿವೆ. ಇದರಿಂದ ಸಾಕಷ್ಟು ಅಪಘಾತ ಪ್ರಕರಣ ದಾಖಲಾಗಿರುವ ಕುರಿತು ದೂರುಗಳು ಇವೆ. ಆದ್ದರಿಂದ ಅಂತಹ ಅವೈಜ್ಞಾನಿಕ ಸ್ಥಳ ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಅದಲ್ಲದೇ ಅಗತ್ಯವಿರುವೆಡೆ ಸೂಚನಾ ಫಲಕ, ಬ್ಯಾರಿಕೇಡ್ ಹಾಗೂ ರಾತ್ರಿ ವೇಳೆ ಎಚ್ಚರಿಕೆ ಬ್ಲಿಂಕರ್ ಸೋಲಾರ್ ವಿದ್ಯುತ್ ದೀಪ ಅಳವಡಿಸುವುದರ ಜೊತೆಗೆ ವೈಜ್ಞಾನಿಕವಾಗಿ ಸರ್ವಿಸ್ ರಸ್ತೆ ಹಾಗೂ ಅಂಡರ್‌ಪಾಸ್ ನಿರ್ಮಿಸಬೇಕು ಎಂದರು.
ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪೈಕಿ ಡಣಾಪುರ ವ್ಯಾಪ್ತಿಯಲ್ಲಿ 1 ಹಾಗೂ ಆಲೂರು ಬಳಿ 2 ಮುಖ್ಯ ಸೇತುವೆ ಸೇರಿ ಒಟ್ಟು 3 ಮುಖ್ಯ ಸೇತುವೆ ಕಾಮಗಾರಿ ನಿಗಧಿತ ಕಾಲ ಮಿತಿಯೊಳಗೆ ಪೂರ್ಣಗೊಳಿಸಬೇಕು. ಕಮಲಾಪುರ, ವೆಂಕಟಾಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಆರು ತಿಂಗಳಲ್ಲಿ ಮೂರು ಚಿರತೆಗಳು ರಸ್ತೆ ಅಪಘಾತದಿಂದ ಸಾವನ್ನಪ್ಪಿವೆ. ಆದ್ದರಿಂದ ವನ್ಯಜೀವಿ ಸಂರಕ್ಷಿಸಿ ಪ್ರಾಣ ಹಾನಿ ತಪ್ಪಿಸಲು ಹೆದ್ದಾರಿಗೆ ಬ್ಯಾರಿಕೇಡ್ ಅಳವಡಿಸಲು ಸೂಚಿಸಿದ ಅವರು, ಕಾಮಗಾರಿಗಾಗಿ ಕಡಿಯಲಾದ ಮರಗಳಿಗೆ ಪರ್ಯಾಯವಾಗಿ ಹೆದ್ದಾರಿಯ ಇಕ್ಕೆಲಗಳಲ್ಲಿ ಕಡ್ಡಾಯವಾಗಿ ಹೊಸ ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದರು.