- ಹೊಸಪೇಟೆಯ ಎಂ.ಪಿ.ಪ್ರಕಾಶ್ ನಗರದಲ್ಲಿ ಘಟನೆ
- ಕಣ್ಣಿಗೆ ಕಾರದಪುಡಿ ಎರಚಿ ಚಾಕುವಿನಿಂದ ಚುಚ್ಚಿ ಕೊಲೆ
- ಚಾಕುವಿನಿಂದ ಚುಚ್ಚಿ ಕೊಲೆಗೈದ ಇಬ್ಬರು ದುಷ್ಕರ್ಮಿಗಳು
ಹೊಸಪೇಟೆ: ನಗರದಲ್ಲಿ ಶನಿವಾರ ರಾತ್ರಿ ಭೀಕರ ಕೊಲೆಯೊಂದು ನಡೆದಿದ್ದು, ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಇಲ್ಲಿನ ನಿವಾಸಿ ಯೂನುಸ್ (30) ಎಂಬ ಯುವಕನನ್ನು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಹೋಗಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.
ಕಣ್ಣಿಗೆ ಕಾರದಪುಡಿ ಎರಚಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಸ್ಥಳೀಯ ಮೂಲಗಳ ಪ್ರಕಾರ, ಈ ಕೊಲೆಗೆ 'ಪ್ರೀತಿ ಪ್ರೇಮದ ವಿಚಾರವೇ' ಕಾರಣ ಎನ್ನಲಾಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಗುಸುಗುಸು ಕೇಳಿಬರುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಇಲ್ಲಿನ ಗ್ರಾಮೀಣ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿ ತಲೆಮರೆಸಿಕೊಂಡಿರುವ ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ಈಗಾಗಲೇ ಜಾಲ ಬೀಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.