ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಕವಿತಾ ಎಸ್,ಮನ್ನಿಕೇರಿ ಮಹನಿಯರ ಜಯಂತಿ ಪೂರ್ವಭಾವಿ ಸಭೆ ನಡೆಸಿದರು. ಎಸ್ಪಿ ಎಸ್.ಜಾಹ್ನವಿ, ಎಎಸ್ಪಿ ಮಂಜುನಾಥ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಡಿವೈಎಸ್ಪಿ ಡಾ.ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ.ಕಾಳೆ ಇತರರಿದ್ದರು. 
ವಿಜಯನಗರ

ಮಹನೀಯರ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ

ಪ್ರಮುಖ ಮುಖ್ಯಾಂಶಗಳು

  • ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ
ಹೊಸಪೇಟೆ: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಜಯಂತಿಯನ್ನು ವಿಜೃಂಭಣೆ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್,ಮನ್ನಿಕೇರಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಮಹನಿಯರ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಮಹನೀಯರ ಜಯಂತಿಯನ್ನು ಸಂಭ್ರಮದಿAದ ಹಬ್ಬದಂತೆ ಆಚರಿಸಲಾಗುಗವುದು. ಏ.05 ರಂದು ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾಂಕೇತಿಕವಾಗಿ ಜಯಂತಿ ಆಚರಿಸಲಾಗುವುದು.
ನಂತರ ಏ.14 ರಂದು ಅಂಬೇಡ್ಕರ್ ಜಯಂತಿ ಹಾಗೂ ಬಾಬು ಜಗಜೀವನ ರಾಮ್ ಜಯಂತಿಯನ್ನು ವಿಜೃಂಭಣೆಯಿAದ ಆಚರಿಸಲಾಗುತ್ತದೆ. ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಈ ಇಬ್ಬರು ಮಹಾನ್ ನಾಯಕರ ಜಯಂತಿಗಳನ್ನು ಸರ್ಕಾರದ ಶಿಷ್ಟಾಚಾರದಂತೆ ಆಚರಿಸಬೇಕು. ನಗರದ ಪ್ರಮುಖ ವೃತ್ತಗಳು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ಜಯಂತಿ ಕೇವಲ ಮೆರವಣಿಗೆಗೆ ಸೀಮಿತವಾಗಬಾರದು.
ಇಂದಿನ ಯುವ ಪೀಳಿಗೆಗೆ ಅಂಬೇಡ್ಕರ್ ಅವರ ಸಂವಿಧಾನಾತ್ಮಕ ಮೌಲ್ಯಗಳು ಹಾಗೂ ಜಗಜೀವನ್ ರಾಮ್ ಅವರ ಕೃಷಿ ಮತ್ತು ಆಡಳಿತಾತ್ಮಕ ಸುಧಾರಣೆಗಳ ಬಗ್ಗೆ ಅರಿವು ಮೂಡಿಸಲು ಉಪನ್ಯಾಸ ಆಯೋಜಿಸಬೇಕು. ಶಾಲೆ-ಕಾಲೇಜುಗಳಲ್ಲಿ ಪ್ರಬಂಧ ಮತ್ತು ಭಾಷಣ ಸ್ಪರ್ಧೆಗಳನ್ನು ಹಮ್ಮಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಹಂಪಿಯಿAದ ಭವ್ಯಜ್ಯೋತಿ ತರುವ ಮೂಲಕ ಬಳ್ಳಾರಿ ರಸ್ತೆಯ ಜೈಭೀಮ್ ವೃತ್ತದಲ್ಲಿ ಜ್ಯೋತಿ ಹಸ್ತಾಂತರಿಸಿದ ನಂತರ ಮೆರವಣೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು. ಗಾಂಧಿಚೌಕು, ಪುಣ್ಯಮೂರ್ತಿ ವೃತ್ತ, ಪುನೀತ್ ರಾಜಕುಮಾರ್ ವೃತ್ತದ ಮೂಲಕ ವಿವಿಧ ಕಲಾ ತಂಡಗಳೊAದಿಗೆ ಅಂಬೇಡ್ಕರ್ ವೃತ್ತದ ವರೆಗೆ ಮೆರವಣಿಗೆ ನಡೆಯಲಿದೆ. ಶಾಂತಿಯುತವಾಗಿ ಮತ್ತು ಸೌಹಾರ್ದಯುತ ಜಯಂತಿಗೆ ಪ್ರತಿಯೊಬ್ಬರು ಸಹಕರಿಸಬೇಕು. ಇದಕ್ಕೆ ಸಮಾಜದ ಸಂಘ ಸಂಸ್ಥೆಗಳ ಸಹಕಾರವು ಅತ್ಯಗತ್ಯ ಎಂದರು.