ಹೊಸಪೇಟೆ ಚಿತ್ತವಾಡಗಿ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಗುರುವಾರ ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕ ಹುಲಿ ಬಂಡಿ ಜಿಲ್ಲಾ ಮಟ್ಟದ ಗಣಿತ ವಿಚಾರ ಸಂಕೀರಣ ಉದ್ಘಾಟಿಸಿದರು. ಡಯಟ್ ಉಪನ್ಯಾಸಕ ಪ್ರಭುರಾಜ್ ಪಾಟೀಲ್ ಅಧ್ಯಕ್ಷತೆ ವಹಿಸಿದರು. ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಬಿ.ಶಿವಾನಂದ್, ಡಯಟ್ ಉಪನ್ಯಾಸಕ ಎ.ಎನ್.ಸುಧಾಕರ್, ಪಪೂ ಶಿಕ್ಷಣ ಇಲಾಖೆಯ ನೋಡಲ್ ಅಧಿಕಾರಿ ನಾಗರಾಜ್ ಹವಾಲ್ದಾರ್, ಬಿಆರ್ ಪಿ ಪ್ರದೀಪ್ ಕುಮಾರ್, ಜಿಲ್ಲಾ ಕ್ಷೇತ್ರ ಸಂಯೋಜಕ ಅಡಿವೇಶಪ್ಪ ಇತರರಿದ್ದರು. 
ವಿಜಯನಗರ

ಗಣಿತ ಕಲಿಕಾ ಆಂದೋಲನದಿಂದ ಮಕ್ಕಳ ಶೈಕ್ಷಣಿಕ ಪ್ರಗತಿ

ಮಂಜುನಾಥ

ಪ್ರಮುಖ ಮುಖ್ಯಾಂಶಗಳು

  • ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕ ಹುಲಿ ಬಂಡಿ ಅಭಿಪ್ರಾಯ
ಹೊಸಪೇಟೆ: ಗಣಿತ ಕಲಿಕಾ ಆಂದೋಲನ ಸ್ಪರ್ಧೆಗಳಿಂದ ವಿದ್ಯಾರ್ಥಿಗಳ ಕಲಿಕಾ ಉತ್ಸಾಹ ಹೆಚ್ಚಳವಾಗಿ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ವೃದ್ಧಿಯಾಗಲು ನೆರವಾಗುತ್ತದೆ ಎಂದು ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕ ಹುಲಿ ಬಂಡಿ ಅಭಿಪ್ರಾಯಪಟ್ಟರು.
ಶಾಲಾ ಶಿಕ್ಷಣ ಇಲಾಖೆ ಹಾಗೂ ಅಕ್ಷರ ಫೌಂಡೇಶನ್ ಸಹಯೋಗದೊಂದಿಗೆ ಇಲ್ಲಿನ ಚಿತ್ತವಾಡಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಗಣಿತ ಕಲಿಕಾ ಆಂದೋಲನ ಕಾರ್ಯಕ್ರಮದ ನಿಮಿತ್ತ ಜಿಲ್ಲಾ ಮಟ್ಟದ ಗಣಿತ ವಿಚಾರ ಸಂಕೀರಣ ಉದ್ಘಾಟಿಸಿ ಮಾತನಾಡಿದರು.
ಗಣಿತ ಎಂದರೆ ಕಬ್ಬಿಣದ ಕಡಲೆ ಎನ್ನುವ ಅಭಿಪ್ರಾಯ ಸಾಮಾನ್ಯವಾಗಿದೆ. ತರಗತಿಗಳಲ್ಲಿ ಗಣಿತ ವಿಷಯವನ್ನು ಪರಿಣಾಮಕಾರಿಯಾಗಿ ಮತ್ತು ಸರಳವಾಗಿ ಬೋಧಿಸುವ ಕುರಿತು ಶಿಕ್ಷಕರಿಂದ ನಿರಂತರ ಪ್ರಯತ್ನಗಳು ನಡೆಯಬೇಕು. ಇಂತಹ ಕಲಿಕಾ ಆಂದೋಲನಗಳಿAದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರಯೋಜನವಾಗಲಿದೆ ಎಂದರು.
ಗಣಿತ ಕಲಿಕಾ ಆಂದೋಲನ ಕಾರ್ಯಕ್ರಮದ ಗಣಿತ ಕಿಟ್ ಬಳಕೆ ಹಾಗೂ ಗಣಿತ ಶಿಕ್ಷಕರು ಪರಿಪೂರ್ಣತೆಗೊಂಡು ಮಕ್ಕಳಿಗೆ ಚಟುವಟಿಕೆ ಆದರಿತವಾಗಿ ಕಲಿಸಲು ತಿಳಿಸಿದರು ಹಾಗೂ ಎಸ್ಡಿಎಂಸಿ ಸಮಿತಿಯವರು ಆಸಕ್ತಿ ವಹಿಸಿ ಉತ್ತಮ ಶಾಲಾ ಪರಿಸರ ನಿರ್ಮಾಣ ಮಾಡಲು ಕೈಜೋಡಿಸಬೇಕೆಂದು ಮಾರ್ಗದರ್ಶನ ಮಾಡಿದರು.