ಕೊಟ್ಟೂರಿನಲ್ಲಿ ಸಾಹಿತಿ ಕುಂ.ವೀರಭದ್ರಪ್ಪ ಅವರಿಗೆ ತಹಸೀಲ್ದಾರ್ ಅಮರೇಶ್ ಜಿ.ಕೆ. ಎಸ್‌ಐಆರ್ ಎನ್ಯುಮರೇಷನ್ ಫಾರ್ಮ್ ನೀಡಿದರು.  
ವಿಜಯನಗರ

ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸಿ

ಅಶೋಕ್ ಕುಮಾರ್ ಎನ್
ಕೊಟ್ಟೂರು: ಸಾಹಿತಿ ಕುಂ.ವೀರಭದ್ರಪ್ಪ ಅವರಿಗೆ ಎನ್ಯುಮರೇಷನ್ ಫಾರ್ಮ್ ನೀಡುವ ಮೂಲಕ ಎಸ್‌ಐಆರ್ ಪ್ರಕ್ರಿಯೆಗೆ ತಹಸೀಲ್ದಾರ್ ಅಮರೇಶ್ ಜಿ.ಕೆ. ಮಂಗಳವಾರ ಚಾಲನೆ ನೀಡಿದರು.
ತಾಲೂಕಿನ ಪ್ರತಿ ಮನೆಗೆ ಭೇಟಿ ನೀಡಿ ಮತದಾರರಿಗೆ ಎನ್ಯುಮರೇಷನ್ ಫಾರ್ಮ್ ವಿತರಿಸಬೇಕು. ಭರ್ತಿಯಾದ ಅರ್ಜಿ ಸಂಗ್ರಹಿಸಿ ನಿಗದಿತ ಅವಧಿಯೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಬಿಎಲ್‌ಒ ಮತ್ತು ಮೇಲ್ವಿಚಾರಕರಿಗೆ ಸೂಚನೆ ನೀಡಿದರು.
ಕಂದಾಯ ನಿರೀಕ್ಷಕ ಡಿ.ಶಿವಕುಮಾರ್, ಗ್ರಾಮ ಆಡಳಿತ ಅಧಿಕಾರಿ ಹರೀಶ್, ಬಿಎಲ್‌ಒ ಶಿವಾನಿ, ಮೇಲ್ವಿಚಾರಕ ಮಂಜುನಾಥಸ್ವಾಮಿ ಇದ್ದರು.