ಹಗರಿಬೊಮ್ಮಹಳ್ಳಿ ರೈಲ್ವೆ ಪ್ಲಾಟ್‌ಫಾರ್ಮ್ ಹಾಗೂ ಗೇಟ್‌ಗಳ ಸಮಸ್ಯೆ ಕುರಿತು ಹುಬ್ಬಳ್ಳಿಯಲ್ಲಿ ರೈಲ್ವೆ ಜನರಲ್ ಮ್ಯಾನೇಜರ್ ಪದ್ಮನಾಭ ಅನಂತಗೆ ನಂದಿಪುರ ಮಠದ ಡಾ.ಮಹೇಶ್ವರ ಸ್ವಾಮೀಜಿ ಮತ್ತು ಭಾರತ ವೀರಶೈವ ಮಹಾಸಭಾ ತಾಲೂಕು ಕೊಟ್ರೇಶ ಶೆಟ್ಟರ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಹಗರಿಬೊಮ್ಮನಹಳ್ಳಿ: ಪಟ್ಟಣದ ರೈಲು ನಿಲ್ದಾಣ ಅಭಿವೃದ್ಧಿ ಹಾಗೂ ವಿವಿಧ ಕಾಮಗಾರಿ ಕೈಗೊಳ್ಳುವುದಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ರೈಲ್ವೆ ವಿಭಾಗೀಯ ಪ್ರಧಾನ ವ್ಯವಸ್ಥಾಪಕ ಪದ್ಮನಾಭ ಅನಂತಗೆ ನಂದಿಪುರದ ಡಾ.ಮಹೇಶ್ವರ ಸ್ವಾಮೀಜಿ, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಕೊಟ್ರೇಶ್ ಶೆಟ್ಟರ್ ನೇತೃತ್ವದಲ್ಲಿ ಸೋಮವಾರ ಮನವಿ ಸಲ್ಲಿಸಲಾಯಿತು.
ಡಾ.ಮಹೇಶ್ವರ ಸ್ವಾಮೀಜಿ ಮಾತನಾಡಿ, ಗೇಟ್ ನಂಬರ್ 37 ಮತ್ತು 38ರ ಮೇಲ್ಸೇತುವೆ ಮತ್ತು ಕೆಳ ಸೇತುವೆ, ಪ್ಲಾಟ್‌ಫಾರ್ಮ್ ಕಾಮಗಾರಿ ಸಮರ್ಪಕವಾಗಿಲ್ಲ. ಇದರಿಂದಾಗಿ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಪೂರ್ಣ ಪ್ರಮಾಣದಲ್ಲಿ ಕಾಮಗಾರಿ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಕೊಟ್ರೇಶ ಶೆಟ್ಟರ್ ಮಾತನಾಡಿ, ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಹೆಚ್ಚಿನ ರೈಲುಗಳ ಸಂಚಾರಕ್ಕೆ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.
ಪ್ರಮುಖರಾದ ಅಕ್ಕಿ ಮಲ್ಲಿಕಾರ್ಜುನ್, ಕೆ.ಮಹೇಶ್ವರ ಗೌಡ, ಪಿ.ಧರ್ಮನಗೌಡ, ಎಚ್.ಮಹಾಲಿಂಗಪ್ಪ ಇದ್ದರು.