ಕಾನಹೊಸಹಳ್ಳಿ ಸಮೀಪದ ಎಂ.ಬಿ.ಅಯ್ಯನಹಳ್ಳಿಯಲ್ಲಿ ಕೂಡ್ಲಿಗಿ ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾದಿಂದ ಆಯೋಜಿಸಿದ್ದ ಕೃಷಿಚಿಂತನಾ ಕಾರ್ಯಕ್ರಮದಲ್ಲಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಮಾತನಾಡಿದರು.
ಕಾನಹೊಸಹಳ್ಳಿ: ರೈತರಿಗೆ ಶಕ್ತಿ ತುಂಬುವುದಕ್ಕಾಗಿ ಬಿಜೆಪಿ ಶ್ರಮಿಸುತ್ತಿದೆ ಎಂದು ಪಕ್ಷದ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ 129ನೇ ಮನ್ ಕಿ ಬಾತ್ ನಿಮಿತ್ತ ಎಂ.ಬಿ.ಅಯ್ಯನಹಳ್ಳಿಯಲ್ಲಿ ಕೂಡ್ಲಿಗಿ ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾದಿಂದ ಆಯೋಜಿಸಿದ್ದ ಕೃಷಿ ಚಿಂತನಾ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು.
ರೈತರ ಹಿತ ಕಾಯುವುದಕ್ಕಾಗಿ ಬಿಜೆಪಿಯಿಂದ ರಾಜ್ಯದಲ್ಲಿ ಮೊದಲ ಬಾರಿಗೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಲಾಗಿತ್ತು. ರೈತರಿಗೆ ವೈಯಕ್ತಿಕವಾಗಿ ಅರ್ಥಿಕ ನೆರವು ನೀಡುತ್ತಾ ಬರಲಾಗಿದೆ. ಕಾಂಗ್ರೆಸ್ ಸರ್ಕಾರ ಕೃಷಿಕರಿಗೆ ಹೊರೆಯಾಗಿದೆ ಎಂದು ದೂರಿದರು.
ಮಂಡಲ ಅಧ್ಯಕ್ಷ ಬಣವಿಕಲ್ಲು ನಾಗರಾಜ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದಾರೆ. ಪ್ರತಿ ತಿಂಗಳು ಮಾಡಿರುವ ಕೆಲಸದ ಮಾಹಿತಿಯನ್ನು ತಿಂಗಳ ಕೊನೆಯ ಭಾನುವಾರ ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ದೇಶದ ನಾಗರಿಕರಿಗೆ ತಿಳಿಸುವ ಉದ್ದೇಶ ಹೊಂದಿದ್ದಾರೆ ಎಂದರು.
ಅಧ್ಯಕ್ಷತೆಯನ್ನು ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎಚ್.ರೇವಣ್ಣ ವಹಿಸಿದ್ದರು. ಗ್ರಾಪಂ ಅಧ್ಯಕ್ಷ ಎಂ.ಸಿ.ಆಶೋಕನಾಯ್ಕ, ತಾಪಂ ಮಾಜಿ ಅಧ್ಯಕ್ಷ ಜೆ.ಸಿ.ಧನುಂಜಯ, ಪ್ರಮುಖರಾದ ಯಜಮಾನಪ್ಪ, ಸೂರ್ಯಪಾಪಣ್ಣ, ಕೋದಂಡರಾಮ, ಬಾಲಣ್ಣ, ರೇಖಾಮಲ್ಲಿಕಾರ್ಜನ್, ಹುಲಿಕೆರೆ ಗೀತಾ, ನಾಗಭೂಷಣ ಇತರರಿದ್ದರು.