ಹಗರಿಬೊಮ್ಮನಹಳ್ಳಿಯಲ್ಲಿ ಕಾಂಗ್ರೆಸ್ ಸೃಜನ ಸಂಘಟನೆ ಅಭಿಯಾನ ಕಾರ್ಯಕ್ರಮಕ್ಕೆ ಎಐಸಿಸಿ ವೀಕ್ಷಕ ವೇಣುಗೋಪಾಲ್‌ರಾವ್ ಚಾಲನೆ ನೀಡಿದರು. 
ವಿಜಯನಗರ

ಕಾರ್ಯಕರ್ತರ ಕೈ ಬಿಡುವುದಿಲ್ಲ ಕಾಂಗ್ರೆಸ್

ಅಶೋಕ್ ಕುಮಾರ್ ಎನ್
ಹಗರಿಬೊಮ್ಮನಹಳ್ಳಿ: ಅಖಂಡ ಬಳ್ಳಾರಿ ಜಿಲ್ಲೆ ಕಾಂಗ್ರೆಸ್ ಭದ್ರಬುನಾದಿಯಾಗಿದ್ದು, ರಾಜ್ಯದಲ್ಲಿ ಮುಂದಿನ ಅವಧಿಗೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಎಐಸಿಸಿ ವೀಕ್ಷಕ ವೇಣುಗೋಪಾಲ್ ರಾವ್ ವಿಶ್ವಾಸ ವ್ಯಕ್ತಪಡಿಸಿದರು.
ಬ್ಲಾಕ್ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಕಾಂಗ್ರೆಸ್ ಸೃಜನ ಸಂಘಟನೆ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಗುರುವಾರ ಮಾತನಾಡಿದರು. ನಿಮ್ಮ ಅಭಿಪ್ರಾಯ ಪಡೆದು ಪಕ್ಷದ ವರಿಷ್ಠರಿಗೆ ವರದಿ ಸಲ್ಲಿಸುವೆ. ಯಾರೇ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದರೂ ಪಕ್ಷ ಸಂಘಟನೆಗೆ ಮುಂದಾಗಿ. ಯಾವ ಕಾರ್ಯಕರ್ತರನ್ನೂ ಪಕ್ಷ ಬಿಡುವುದಿಲ್ಲ ಎಂದರು.
ಮಾಜಿ ಶಾಸಕ ಎಸ್.ಭೀಮಾನಾಯ್ಕ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ಸನ್ನು ಕಾಂಗ್ರೆಸ್ಸಿಗರೇ ಸೋಲಿಸಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಯಾವ ಸ್ಥಿತಿಯಲ್ಲಿದೆ, ಪಕ್ಷ ಸೋಲಿಗೆ ಕಾರಣ ಯಾರು, ಚುನಾವಣೆಯಲ್ಲಿ ಯಾರು ದೂರ ಉಳಿದರು ಎನ್ನುವ ಮಾಹಿತಿ ವೀಕ್ಷಕರಿಗೆ ತಿಳಿಸಿ ಎಂದು ಕಾರ್ಯಕರ್ತರಿಗೆ ತಿಳಿಸಿದರು.
ಕೆಪಿಸಿಸಿ ಉಪಾಧ್ಯಕ್ಷ ಸುಭಾಷ್ ರಾಥೋಡ್, ವೀಕ್ಷಕಿ ಆರತಿ ಚಂದ್ರಶೇಖರ, ಗ್ರಾಮೀಣ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ, ಮಹಿಳಾ ಜಿಲ್ಲಾಧ್ಯಕ್ಷೆ ಜಾಹಿರಾಬಾನು, ಬ್ಲಾಕ್ ಅಧ್ಯಕ್ಷ ಕೋರಿ ಗೋಣಿಬಸಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಯಶೋದಾ, ಕೊಟ್ಟೂರು ಬ್ಲಾಕ್ ಅಧ್ಯಕ್ಷ ದ್ವಾರಕೇಶ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ, ತಾಲೂಕು ಅಧ್ಯಕ್ಷ ಸೊನ್ನದ ಗುರುಬಸವರಾಜ, ವಕ್ತಾರ ಪತ್ರೇಶ ಹಿರೇಮಠ, ನಂದಿಬಂಡಿ ಸೋಮಪ್ಪ ಇತರರಿದ್ದರು.