ಕೊಟ್ಟೂರಿನಲ್ಲಿ ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುತ್ತಿದ್ದ ಗೃಹಬಳಕೆ ಸಿಲಿಂಡರ್‌ಗಳನ್ನು ಆಹಾರ ಇಲಾಖೆ ನಿರೀಕ್ಷಕ ಮಂಜುನಾಥ ಜಪ್ತಿಮಾಡಿದರು.
ಕೊಟ್ಟೂರು: ಆಹಾರ ಇಲಾಖೆ ನಿರೀಕ್ಷಕ ಮಂಜುನಾಥ ಪಟ್ಟಣದ ವಿವಿಧೆಡೆ ಸೋಮವಾರ ದಾಳಿ ನಡೆಸಿ ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಗೃಹ ಬಳಕೆ ಸಿಲಿಂಡರ್‌ಗಳನ್ನು ಜಪ್ತಿ ಮಾಡಿದರು.
ವಿಜಯನಗರ ಜಿಲ್ಲಾಧಿಕಾರಿ, ಆಹಾರ ಇಲಾಖೆ ಅಧೀಕ್ಷಕ ಹಾಗೂ ತಹಸೀಲ್ದಾರ್ ಸೂಚನೆ ಮೇರೆಗೆ ಈ ದಾಳಿ ನಡೆಸಿದರು. ಪಟ್ಟಣದ ಧಾಬಾ, ಹೋಟೆಲ್, ಚಿಕನ್ ಸೆಂಟರ್ ಇತರೆಡೆ ದಾಳಿ ಕೈಗೊಂಡು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುತ್ತಿದ್ದ 11 ಗೃಹಬಳಕೆ ಸಿಲಿಂಡರ್‌ಗಳನ್ನು ಜಪ್ತಿ ಮಾಡಿದರು.