ಹೊಸಪೇಟೆಯಲ್ಲಿ ಶನಿವಾರ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ, ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಗುಜ್ಜಲ ನಾಗರಾಜ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ, ಪ್ರಮುಖರಾದ ಸಿ.ಆರ್.ಭರತ್ ಕುಮಾರ್, ಜಾವೇದ್, ದಾದಾಪೀರ್, ಅತಾಯ್ ರಸೂಲ್, ಟಿ.ಶಿವಪ್ಪ ಇತರರಿದ್ದರು. 
ವಿಜಯನಗರ

ಜಮೀರ್ ಸಚಿವ ಸ್ಥಾನ ನೀಡಲು ಒತ್ತಾಯ

ಮಂಜುನಾಥ

ಪ್ರಮುಖ ಮುಖ್ಯಾಂಶಗಳು

  • ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆ
ಹೊಸಪೇಟೆ: ಶಾಸಕ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ, ನಗರದ ಡಾ.ಪುನೀತ್ ರಾಜ್ ಕುಮಾರ್ ವೃತ್ತದಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಗುಜ್ಜಲ ನಾಗರಾಜ ಮಾತನಾಡಿ, ಚಾಮರಾಜಪೇಟೆ ಕ್ಷೇತ್ರದ ಹಿರಿಯ ಶಾಸಕ ಮತ್ತು ಅಲ್ಪಸಂಖ್ಯಾತ ಸಮುದಾಯದ ಪ್ರಮುಖ ಧ್ವನಿಯಾಗಿರುವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು 4 ಬಾರಿ ಶಾಸಕರಾಗಿ, ಸಚಿವರಾಗಿ ಉತ್ತಮ ಸೇವೆ ನೀಡುತ್ತಾ ಬಂದಿದ್ದಾರೆ. ಹಿರಿತನ ಮತ್ತು ಅನುಭವದ ಆಧಾರದ ಮೇಲೆ ಈ ಹಿಂದೆ ಅವರಿಗೆ ನೀಡಲಾಗಿದ್ದ ಆಹಾರ ಮತ್ತು ನಾಗರಿಕ ಸರಬರಾಜು, ವಸತಿ ಮತ್ತು ವಕ್ಫ್ ಮತ್ತು ಹಜ್ ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಮತ್ತು ಸಚಿವ ಸಂಪುಟದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡುವುದು ಕಾಂಗ್ರೆಸ್ ಪಕ್ಷದ ಸಾಮಾಜಿಕ ನ್ಯಾಯದ ಬದ್ಧತೆಗೆ ಅನುಗುಣವಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಅಲ್ಪಸಂಖ್ಯಾತರ ವಿಶ್ವಾಸವನ್ನು ಗಳಿಸಿರುವ ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೇಸ್ ಪಕ್ಷದ ಹೈಕಮಾಂಡ್ ನ್ನು ಒತ್ತಾಯಿಸಿದ ಅವರು, 15 ದಿನದೊಳಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ ನೀಡುವುದಾಗಿ ಎಚ್ಚರಿಸಿದರು.