ಪೆಟ್ರೋಲ್, ಡೀಸೆಲ್ ಮತ್ತು ರಸಗೊಬ್ಬರ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಹೂವಿನಹಡಗಲಿಯಲ್ಲಿ ತಹಸೀಲ್ದಾರ್ ಕೆ.ಎಂ.ಗುರುಬಸವರಾಜಗೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಮನವಿ ಸಲ್ಲಿಸಲಾಯಿತು. 
ವಿಜಯನಗರ

ರಸಗೊಬ್ಬರ-ಡೀಸೆಲ್ ಬೆಲೆ ಏರಿಕೆಯಿಂದ ಸಂಕಷ್ಟ

ಅಶೋಕ್ ಕುಮಾರ್ ಎನ್
ಹೂವಿನಹಡಗಲಿ: ಪೆಟ್ರೋಲ್, ಡೀಸೆಲ್ ಮತ್ತು ರಸಗೊಬ್ಬರ ಬೆಲೆ ಏರಿಕೆಯಿಂದ ರೈತರಿಗೆ ತೊಂದರೆಯಾಗುತ್ತಿದ್ದು, ಬೆಲೆ ಏರಿಕೆಗೆ ಕಡಿವಾಣ ಹಾಕುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿ ತಹಸೀಲ್ದಾರ್ ಕೆ.ಎಂ.ಗುರುಬಸವರಾಜಗೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಸೋಮವಾರ ಮನವಿ ಸಲ್ಲಿಸಲಾಯಿತು.
ತಾಲೂಕು ಅಧ್ಯಕ್ಷ ಎಚ್.ಸಿದ್ದಪ್ಪ ಮಾತನಾಡಿ, ರಾಜ್ಯದ ರೈತರು ಮುಂಗಾರು ಹಂಗಾಮಿನ ಬಿತ್ತನೆಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ರಸಗೊಬ್ಬರ ಮತ್ತು ಡೀಸೆಲ್ ಬೆಲೆ ಏರಿಕೆ ಆಘಾತ ಉಂಟುಮಾಡಿದೆ. ಇತ್ತೀಚಿಗೆ ಡೀಸೆಲ್ ಬೆಲೆ ನಿರಂತರ ಏರಿಕೆಯಾಗಿದ್ದು, ಟ್ರ್ಯಾಕ್ಟರ್, ಉಳುಮೆ, ನೀರಾವರಿ ಪಂಪ್‌ಸೆಟ್ ಬಳಕೆ ಮತ್ತು ಬೆಳೆ ಸಾಗಾಣಿಕೆ ವೆಚ್ಚ ಹೆಚ್ಚಿದೆ. ರಸಗೊಬ್ಬರ ಬೆಲೆಯೂ ಹೆಚ್ಚಿರುವುದು ಸಣ್ಣ ಮತ್ತು ಮಧ್ಯಮ ವರ್ಗದ ರೈತರು ಬಿತ್ತನೆಗೆ ಸಮಸ್ಯೆ ಎದುರಿಸುತ್ತಿದ್ದಾರೆ ಎಂದರು.
ಪ್ರಧಾನ ಕಾರ್ಯದರ್ಶಿ ಶಿವರಾಜ, ಕಾರ್ಯದರ್ಶಿ ದುರುಗಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವಿಜಯಲಕ್ಷ್ಮೀ, ಉಪಾಧ್ಯಕ್ಷ ವಿಠಲ ನಾಯ್ಕ, ವಿ.ಬಿ.ಚನ್ನಬಸಪ್ಪ, ತಾಲೂಕು ಕಾರ್ಯಾಧ್ಯಕ್ಷ ಡಾಕ್ಯಾ ನಾಯ್ಕ, ಕಾರ್ಯದರ್ಶಿ ವೆಂಕಟೇಶ್ ನಾಯ್ಕ, ಪ್ರಮುಖರಾದ ಭೋಜ್ಯನಾಯ್ಕ, ದಾವಲ್ ಸಾಬ್, ಶೇಖರ ನಾಯ್ಕ, ಬಸವರಾಜ್ ಇತರರಿದ್ದರು.