ಹೊಸಪೇಟೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಇಂದು ಇಂಧನ ಪೂರೈಕೆ ಕಂಪನಿಗಳ ಮಾಲೀಕರು ಹಾಗೂ ವಿತರಕರ ತುರ್ತು ಸಭೆಯ ನಡೆಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್ ಇತರರಿದ್ದರು.
- ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ
ಹೊಸಪೇಟೆ: ಜಿಲ್ಲೆಯಲ್ಲಿ ಇಂಧನ, ತೈಲಗಳಾದ ಪೆಟ್ರೋಲ್ ಮತ್ತು ಡೀಸೆಲ್ ಸಾಕಷ್ಟು ದಾಸ್ತಾನಿದ್ದು ಯಾವುದೇ ಕೊರತೆಯಿಲ್ಲ. ಇಂಧನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವೂ ಸಹ ಉಂಟಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಇಂದು ಇಂಧನ ಪೂರೈಕೆ ಕಂಪನಿಗಳ ಮಾಲೀಕರು ಹಾಗೂ ವಿತರಕರ ತುರ್ತು ಸಭೆಯ ನಡೆಸಿ ಮಾತನಾಡಿದರು.
ಜಿಲ್ಲೆಯಲ್ಲಿ ಇಂಧನ ಸಂಗ್ರಹ ಸಮರ್ಪಕವಾಗಿದ್ದು, ಎಂದಿನAತೆ ನಿರಂತರವಾಗಿ ಗ್ರಾಹಕರಿಗೆ ಸಿಗಲಿದೆ. . ಇಂಧನ ಕೊರತೆ ಕೇವಲ ವದಂತಿಯಷ್ಟೇ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಮುಂದಿನ ಹಲವು ದಿನಗಳಿಗೆ ಸಾಕಾಗುವಷ್ಟು ಇಂಧನ ದಾಸ್ತಾನು ಲಭ್ಯವಿದೆ. ಸಾರಿಗೆ ಮತ್ತು ಸರಬರಾಜಿನಲ್ಲಿಯೂ ಯಾವುದೇ ವ್ಯತ್ಯಾಸಗಳಿಲ್ಲ. ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದು. ಜಿಲ್ಲೆಯ ಎಲ್ಲಾ ಪೆಟ್ರೋಲ್ ಬಂಕ್‌ಗಳಿಗೆ ನಿರಂತರವಾಗಿ ಇಂಧನ ಪೂರೈಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯ ಪ್ರತಿಯೊಂದು ಪೆಟ್ರೋಲ್ ಬಂಕ್‌ಗಳಲ್ಲಿ ಲಭ್ಯವಿರುವ ಇಂಧನದ ದಾಸ್ತಾನು ವಿವರ ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಯಾವುದೇ ಕಾರಣಕ್ಕೂ ಇಂಧನ ಪೂರೈಕೆ ಬಗ್ಗೆ ಕೃತಕ ಅಭಾವ ಸೃಷ್ಟಿಸಬಾರದು. ಒಂದು ವೇಳೆ ಕೃತಕ ಅಭಾವ ಸೃಷ್ಟಿಸುವುದು, ಇಂಧನ ಕೊರತೆಯ ಸುಳ್ಳು ವದಂತಿ ಹಬ್ಬಿಸುವವರ ವಿರುದ್ಧ ಅಥವಾ ನಿಗದಿತ ದರಕ್ಕಿಂತ ಹೆಚ್ಚು ವಸೂಲಿ ಮಾಡುವ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ವಲಯದಲ್ಲಿ ಈ ರೀತಿಯ ಪ್ರಕರಣ ಕಂಡು ಬಂದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಅಥವಾ ಸಂಬAಧಪಟ್ಟ ಅಧಿಕಾರಿಗಳಿಗೆ ದೂರು ನೀಡಬಹುದು ಎಂದರು.