ಹೊಸಪೇಟೆ ಒಳಂಗಣ ಕ್ರೀಡಾಂಗಣದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ನ್ಯಾಯಾಧೀಶ ಡಿ.ಪಿ.ಕುಮಾರಸ್ವಾಮಿ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ನ್ಯಾಯಾಧೀಶರಾದ ಪ್ರಶಾಂತ್ ನಾಗಲಾಪುರ್, ಜೆ.ಚೈತ್ರ, ಶೃತಿ ತೇಲಿ, ಎಸ್ಪಿ ಎಸ್.ಜಾಹ್ನವಿ ಇತರರಿದ್ದರು. 
ವಿಜಯನಗರ

ಸುರಕ್ಷಿತವಾಗಿ ವಾಹನ ಚಲಾಯಿಸಿ ಜೀವ ಉಳಿಸಿ

ಮಂಜುನಾಥ

ಪ್ರಮುಖ ಮುಖ್ಯಾಂಶಗಳು

  • ರಸ್ತೆ ಸುರಕ್ಷತಾ ಸಮಾರೋಪ ಸಮಾರಂಭದಲ್ಲಿ ನ್ಯಾ.ಡಿ.ಪಿ.ಕುಮಾರಸ್ವಾಮಿ ಸಲಹೆ

ಹೊಸಪೇಟೆ: ಮಾನವ ಜನ್ಮ ಮಹತ್ವವಾದದ್ದು, ನಮ್ಮಿಂದ ಇನ್ನೊಬ್ಬರ ಜೀವಕ್ಕೆ ತೊಂದರೆಯಾಗದ ರೀತಿಯಲ್ಲಿ ಬದುಕಿದಾಗ ಮಾತ್ರ ಜನ್ಮ ಸಾರ್ಥಕ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಪಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ನಗರದ ಒಳಂಗಣ ಕ್ರೀಡಾಂಗಣದಲ್ಲಿ ನಡೆದ 37ನೇ ರಸ್ತೆ ಸುರಕ್ಷತಾ ಮಾಸಾಚರಣೆ ಸಮಾರೋಪ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜೀವಿಸುವುದು ಪ್ರತಿಯೊಬ್ಬರ ಮೂಲಭೂತ ಹಕ್ಕು. ಆದ್ದರಿಂದ ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಅಪಘಾತ ತಪ್ಪಿಸುವ ಮೂಲಕ ಇತರರ ಹಕ್ಕುಗಳನ್ನು ಗೌರವಿಸಬೇಕು. ಚಾಲಕರ ಅಜಾಗರೂಕತೆ ವಾಹನ ಚಾಲನೆಯಿಂದ ಸಂಚಾರ ನಿಯಮ ಉಲ್ಲಂಘನೆಯಿA ರಸ್ತೆ ಅಪಘಾತಕ್ಕೆ ಕಾರಣವಾಗಲಿದೆ. ಇಂತಹ ರಸ್ತೆ ಅಪಘಾತದಿಂದ ಅಂಗವೈಕಲ್ಯತೆ ಉಂಟಾಗುವುದಲ್ಲದೆ, ಸಾವು ನೋವು ಸಂಭವಿಸಬಹುದು. ಇದರಿಂದ ಕುಟುಂಬಗಳು ಆರ್ಥಿಕವಾಗಿ, ಸಾಮಾಜಿಕವಾಗಿ ಸಂಕಷ್ಟಕ್ಕೆ ಸಿಲುಕಲಿದೆ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಕಾನೂನು ಮತ್ತು ಸಂಚಾರಿ ನಿಯಮಗಳನ್ನು ಪಾಲಿಸಬೇಕಿದೆ. ಆದ್ದರಿಂದ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ರಸ್ತೆ ಸುರಕ್ಷತಾ ಮತ್ತು ಸಂಚಾರಿ ನಿಯಮ ಪಾಲಿಸಬೇಕು. ಮಾನವ ಜನ್ಮ ತುಂಬಾ ಅಮೂಲ್ಯವಾದುದು, ಮತ್ತೊಬ್ಬರ ಜೀವಕ್ಕೆ ತೊಂದರೆಯಾಗದ ರೀತಿಯಲ್ಲಿ ರಸ್ತೆ ಸುರಕ್ಷತಾ ಕ್ರಮಗಳ ಅನುಸರಿಸಿ ವಾಹನ ಚಾಲನೆ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಪ್ರಧಾನ ಹಿರಿಯ ಸಿವಿಲ್ ಮತ್ತು ಸಿಜೆಎಂ ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ್, ಅಪರ ಸಿವಿಲ್ ನ್ಯಾಯಾಧೀಶೆ ಜೆ.ಚೈತ್ರ, 2ನೇ ಅಪರ ಸಿವಿಲ್ ನ್ಯಾಯಾಧೀಶೆ ಶೃತಿ ತೇಲಿ, ಎಸ್ಪಿ ಎಸ್.ಜಾಹ್ನವಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ್, ವಕೀಲರ ಸಂಘದ ಅಧ್ಯಕ್ಷ ಗುಜ್ಜಲ್ ನಾಗರಾಜ್, ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರಪ್ಪ ದೊಂಬರ್ ಮತ್ತೂರು, ಕೆಎಸ್ಆರ್ಟಿಸಿ ವಿಭಾಗೀಯ ಹಿರಿಯ ನಿಯಂತ್ರಣಾಧಿಕಾರಿ ರಾಜೇಶ್ ಹುದ್ದಾರ್ ಇತರರಿದ್ದರು.