ಕೂಡ್ಲಿಗಿ ಪಪಂ ಕಚೇರಿಯಲ್ಲಿ ವೇಮನ ಜಯಂತಿ ಆಚರಿಸಲಾಯಿತು. 
ವಿಜಯನಗರ

ಅನಿಷ್ಟ ಪದ್ದತಿ ಹೋಗಲಾಡಿಸಲು ಶ್ರಮ

ಅಶೋಕ್ ಕುಮಾರ್ ಎನ್
ಕೂಡ್ಲಿಗಿ: ವೇಮನ ಅವರು ಜಾತೀಯತೆ, ಅಂಧ ಶ್ರದ್ಧೆ ಮತ್ತು ಮೇಲು-ಕೀಳುಗಳನ್ನು ಕಾವ್ಯಗಳ ಮೂಲಕ ವಿರೋಧಿಸಿದರು ಎಂದು ಪಪಂ ಕಂದಾಯ ನಿರೀಕ್ಷಕಿ ಕೆ.ಎಂ.ಶಶಿಕಲಾ ಹೇಳಿದರು.
ಪಟ್ಟಣದ ಪಪಂ ಕಚೇರಿಯಲ್ಲಿ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ವೇಮನ ಅವರ ಪದ್ಯಗಳು ಜನಸಾಮಾನ್ಯರ ಭಾಷೆಯಲ್ಲಿದ್ದು, ಜೀವನದ ಸಾರವನ್ನು ತಿಳಿಸುತ್ತವೆ. ಮನುಕುಲದ ಉನ್ನತಿಗೆ ಸನ್ಮಾರ್ಗದ ಉಪದೇಶ ನೀಡಿದ್ದಾರೆ. ಕವಿ ಮತ್ತು ದಾರ್ಶನಿಕರಾಗಿದ್ದ ವೇಮನ ಅವರು ಸಮಾಜದಲ್ಲಿನ ಮೌಢ್ಯ, ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಲು ನಿರಂತರ ಶ್ರಮಿಸಿದ್ದರು ಎಂದು ತಿಳಿಸಿದರು.
ಸಮಾಜದಲ್ಲಿ ಅವರು ಕಂಡ ಸತ್ಯವನ್ನು ಕಹಿಯಾದ ಭಾಷೆಯಲ್ಲಿ ಹಾಡಿ, ಜನರಲ್ಲಿ ಅರಿವಿನ ಬೀಜ ಬಿತ್ತಿದ್ದರು. ತತ್ವಪದಗಳ ಮೂಲಕ ಸಾಮಾಜಿಕ ಪರಿವರ್ತನೆಗೆ ಮುಂದಾಗಿದ್ದರು. ವೇಮನ ಅವರ ತತ್ವ, ಸಿದ್ಧಾಂತ ಸರ್ವ ಸಮುದಾಯಕ್ಕೂ ತಲುಪಲಿ ಎಂಬ ಉದ್ದೇಶದಿಂದ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಮಹಾಯೋಗಿ ವೇಮನ ಅಧ್ಯಯನ ಪೀಠ ಸ್ಥಾಪಿಸಲಾಗಿದೆ ಎಂದರು.