ಹೊಸಪೇಟೆ ಫ್ರೀಡಂ ಪಾರ್ಕಿನಲ್ಲಿ ಭಾನುವಾರ ಪತ್ರಿಕಾ ದಿನಾಚರಣೆ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಪತ್ರಕರ್ತರ ಕುಟುಂಬದ ಸಮ್ಮಿಲನ ಕಾರ್ಯಕ್ರಮದಲ್ಲಿ ಆಟೋಟ ಸ್ಪರ್ಧೆಗಳು ನಡೆದವು.
- ಕಾನಿಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್ ಅಭಿಪ್ರಾಯ
ಹೊಸಪೇಟೆ: ಹಗಲಿರುಳು ಸಮಾಜದ ಏಳುಬೀಳು ಹಾಗೂ ಏಳ್ಗೆಯ ಬಗ್ಗೆ ಬೆಳಕು ಚೆಲ್ಲುವ ಪತ್ರಕರ್ತರು ಪ್ರಸ್ತುತ ಅನೇಕ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕಾನಿಪ) ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್ ಕಳವಳ ವ್ಯಕ್ತಪಡಿಸಿದರು.
ನಗರದ ಫ್ರೀಡಂ ಪಾರ್ಕಿನಲ್ಲಿ ಭಾನುವಾರ ಪತ್ರಿಕಾ ದಿನಾಚರಣೆ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಪತ್ರಕರ್ತರ ಕುಟುಂಬದ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮಾಜಕ್ಕೆ ವಸ್ತುನಿಷ್ಠ ಮಾಹಿತಿ ನೀಡುವ ನೇರ ಹಾಗೂ ನಿಷ್ಠುರ ಪತ್ರಕರ್ತರಿಂದ ಸಾಮಾಜಿಕ ಜನಜೀವನದಲ್ಲಿ ಬದಲಾವಣೆ ಸಾಧ್ಯವಾಗುತ್ತಿದೆ. ಆದರೆ, ಪತ್ರಕರ್ತರು ತಮ್ಮ ಸ್ವಂತ ಕುಟುಂಬಗಳ ನಿರ್ವಹಣೆಯಲ್ಲಿ ಎಡವುತ್ತಿದ್ದಾರೆ. ಮನೆಗೆ ಮಾರಿ ಊರಿಗೆ ಉಪಕಾರಿ ಎನ್ನುವಂತೆ ಪತ್ರಕರ್ತರ ಬದುಕು ಸಾಗುತ್ತಿದೆ. ವೃತ್ತಿ ಒತ್ತಡದಿಂದಾಗಿ ಕುಟುಂಬದ ಜೊತೆ ಕಾಲ ಕಳೆಯುವುದೇ ಅಪರೂಪವಾಗಿದೆ. ಪತ್ರಕರ್ತರು ತಮ್ಮ ಆರೋಗ್ಯದ ಜೊತೆಗೆ ಕುಟುಂಬದ ಕಡೆಗೂ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಕಾನಿಪ ರಾಜ್ಯ ಸಮಿತಿ ಸದಸ್ಯ ವೆಂಕೋಬ ಪೂಜಾರ್ ಮಾತನಾಡಿ, ಸಮಾಜದ ಸ್ವಾಸ್ಥ್ಯ ಕಾಪಾಡಲು ಹಗಲಿರುಳೆನ್ನದೆ ಕರ್ತವ್ಯ ನಿರ್ವಹಿಸುತ್ತಿರುವ ಪತ್ರಕರ್ತರ ಮತ್ತು ಅವರ ಕುಟುಂಬದ ಸಂತೋಷಕ್ಕಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪರಸ್ಪರ ಮಾನವೀಯ ಸಂಬAಧಗಳನ್ನು ಭದ್ರಗೊಳಿಸುವಲ್ಲಿ ಇಂತಹ ಕುಟುಂಬ ಸಮ್ಮಿಲನ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದರು.
ಸಮ್ಮಿಲನದ ಅಂಗವಾಗಿ ಪತ್ರಕರ್ತರು ಹಾಗೂ ಅವರ ಕುಟುಂಬಸ್ಥರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕಾನಿಪ ರಾಜ್ಯ ಸಮಿತಿ ಸದಸ್ಯ ವೆಂಕೋಬ ಪೂಜಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್, ಪತ್ರಕರ್ತರಾದ ಕುಮಾರ್ ಸ್ವಾಮಿ, ಸುರೇಶ್ ಅನಂತ ಜೋಶಿ, ಶಿವಾನಂದ್, ವೆಂಕಟೇಶ, ಸಿ.ಕೆ.ನಾಗರಾಜ್, ಸಂಜಯ್ ಕುಮಾರ್, ಪಾಂಡುರAಗ, ಇಂದಿರಾ, ವಿರೇಶ್ ಪತ್ತಾರ್, ಪ್ರಭು ಇತರರಿದ್ದರು.