ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಂಪಿ ಉತ್ಸವ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿದರು. ಜಿ.ಪಂ. ಸಿಇಓ ನೋಂಗ್ಜಾಯ್ ಮಹಮದ್ ಅಲಿ ಅಕ್ರಂ ಷಾ, ಉಪವಿಭಾಗಾಧಿಕಾರಿ ವಿವೇಕಾನಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದೇರ್ಶಕ ಸಿದ್ಧಣ್ಣನ ರಂಗನವರ್ ಇದ್ದರು.
- ಹಂಪಿ ಉತ್ಸವ ನಿಮಿತ್ತ ಸಂಘ, ಸಂಸ್ಥೆಗಳೊAದಿಗೆ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ
ಹೊಸಪೇಟೆ: ಹಂಪಿ ಉತ್ಸವ ಫೆ.13 ರಿಂದ 15 ರವರೆಗೆ ನಡೆಯಲಿದ್ದು, ಸಂಗೀತ, ಸಾಂಸ್ಕೃತಿಕ, ಕಲೆ, ನಾಟಕ ಹೀಗೆ ವಿವಿಧ ರೀತಿಯ ಕಲಾವಿದರಿಗೆ ಕಾರ್ಯಕ್ರಮಗಳಲ್ಲಿ ಸಮಾನ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸ್ಥಳೀಯ ಕಲಾವಿರು ಮತ್ತು ಸಂಘ, ಸಂಸ್ಥೆಗಳೊAದಿಗೆ ನಡೆದ ಹಂಪಿ ಉತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಉತ್ಸವವನ್ನು ಕಳೆದ ಬಾರಿಗಿಂತಲೂ ವಿಶೇಷ ಮತ್ತು ವಿನೂತನವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅದರಂತೆ ಸಕಲ ಸಿದ್ದತೆ ಕೈಗೊಳ್ಳಲಾಗುತ್ತಿದೆ. ಆಗಾಗಿ ಎಲ್ಲಾ ಕಲಾವಿದರು, ಸಂಘ ಸಂಸ್ಥೆಗಳು ಸಾರ್ವಜನಿಕರು ಸಹಕಾರ ನೀಡಬೇಕು. ಹಂಪಿ ಉತ್ಸವ ಎಂದರೆ ಕಲಾವಿದರ ದಂಡೆ ಸೇರುತ್ತದೆ. ಆಗಾಗಿ ಇಲ್ಲಿನ ಸ್ಥಳೀಯ ಕಲಾವಿದರನ್ನ ಸಮಗ್ರವಾಗಿ ಪರಿಶೀಲಿಸಿ ಅರ್ಹ ಮತ್ತು ನೈಜ ಕಲಾವಿದರಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದರು.
ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ ಮಾತನಾಡಿ, ಸಿನಿಮಾ ತಾರೆಯರಿಗೆ ಮಾತ್ರ ಮುಖ್ಯ ವೇದಿಕೆಗೆ ಅವಕಾಶ ನೀಡಲಾಗುತ್ತದೆ. ನಮ್ಮಂತಹ ಸ್ಥಳೀಯ ಕಲಾವಿದರಿಗೆ ಕಡೆಗಣಿಸಲಾಗುತ್ತದೆ. ಈ ರೀತಿ ಭೇದ-ಭಾವ ಧೋರಣೆ ಅನುಸರಿಸದೇ ಎಲ್ಲರನ್ನು ಸಮಾನತೆಯಿಂದ ಕಾಣುವುದರ ಜತೆಗೆ ಸಮಾನ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ವಿಶೇಷ ಚೇತನರಿಗೂ ಅವಕಾಶ ನೀಡಿ
ಉತ್ಸವದಲ್ಲಿ ಅಂಗವಿಕಲರಿಗೆ ಪಾರ್ಕಿಂಗ್ ವ್ಯವಸ್ಥೆಯೇ ಕಗ್ಗಂಟಾಗಿ ಪರಿಣಮಿಸಿದೆ. ಮುಖ್ಯ ವೇದಿಕೆಗೂ ಪಾರ್ಕಿಂಗ್ ಸ್ಥಳಕ್ಕೂ ದೂರವಿದೆ. ಸಾರಿಗೆ ಸೌಲಭ್ಯ, ಪಾಸ್ ವ್ಯವಸ್ಥೆಯಿಲ್ಲದೇ ವೇದಿಕೆಗೆ ಹೋಗುವುದು ಸಾಧ್ಯವಿಲ್ಲ. ಇದರಿಂದಾಗಿ ಹಂಪಿ ಉತ್ಸವ ನೋಡಲಾಗುತ್ತಿಲ್ಲ. ಕೇಳಲಾಗುತ್ತಿಲ್ಲ. ಆದ್ದರಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಬೇಕು ಎಂದು ಸಂಘ ಸಂಸ್ಥೆಗಳ ಪ್ರಮುಖರು ಒತ್ತಾಯಿಸಿದರು.
ಮುಂಗಡ ಹಣ ಪಾವತಿಸಿ
ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಯ್ಕೆಯಾದ ಕಲಾವಿದರಿಗೆ ಮುಂಗಡವಾಗಿ ಹಣ ಪಾವತಿಸಬೇಕು ಎಂದು ಕಲಾವಿದ ಒತ್ತಾಯಕ್ಕೆ ಪ್ರತಿಕ್ರಿಯಸಿದ ಜಿಲ್ಲಾಧಿಕಾರಿ, ಉತ್ಸವಕ್ಕಾಗಿ ಸರ್ಕಾರಕ್ಕೆ 22 ಕೋಟಿ ರೂ. ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಸದ್ಯ ಅನುದಾನ ಕೊರೆತೆಯಿದೆ. ಆಗಾಗಿ ಕಲಾವಿದರಿಗೆ ಮುಂಗಡವಾಗಿ ಹಣ ಸಂದಾಯ ಮಾಡಲಾಗುವುದಿಲ್ಲ. ಸರ್ಕಾರದಿಂದ ಹಣ ಬಿಡುಗಡೆಯಾದ ನಂತರ ಏಕ ಕಂತಿನಲ್ಲಿ ಪೂರ್ಣ ಸಂಭಾವನೆ ಪಾವತಿಸಲಾಗುವುದು ಎಂದು ತಿಳಿಸಿದರು.