ಹಗರಿಬೊಮ್ಮನಹಳ್ಳಿ ಪುರಸಭೆ ಕಚೇರಿಯಲ್ಲಿ ಪೌರ ಕಾರ್ಮಿಕರಿಗೆ ಸ್ವೆಟರ್ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಯಿತು. ಪುರಸಭೆ ಅಧ್ಯಕ್ಷ ಎಂ.ಮರಿರಾಮಪ್ಪ, ಸದಸ್ಯ ದೀಪಕ್ ಸಾ ಕಠಾರೆ, ಮುಖ್ಯಾಧಿಕಾರಿ ಎಂ.ಕೆ.ಮುಗಳಿ ಇತರರಿದ್ದರು. 
ವಿಜಯನಗರ

ಅನಾರೋಗ್ಯದಿಂದ ಕುಟುಂಬ ನಿರ್ವಹಣೆ ಕಷ್ಟ

ಪ್ರಮುಖ ಮುಖ್ಯಾಂಶಗಳು

  • ಪೌರ
  • ಕಾರ್ಮಿಕರಿಗೆ
  • ಸ್ವೆಟರ್
ಹಗರಿಬೊಮ್ಮನಹಳ್ಳಿ: ಪೌರ ಕಾರ್ಮಿಕರು ಸಾರ್ವಜನಿಕರ ಆರೋಗ್ಯ ಕಾಪಾಡುವ ಜತೆ ಅವರ ಆರೋಗ್ಯ ಕಾಪಾಡುವುದು ಮುಖ್ಯ ಎಂದು ಪುರಸಭೆ ಅಧ್ಯಕ್ಷ ಎಂ.ಮರಿರಾಮಪ್ಪ ಹೇಳಿದರು.
ಪಟ್ಟಣದ ಪುರಸಭೆಯಿಂದ ಗುರುವಾರ ಪೌರ ಕಾರ್ಮಿಕರಿಗೆ ಸ್ವೆಟರ್ ಹಾಗೂ ಸಮವಸ್ತ್ರಗಳನ್ನು ವಿತರಿಸಿ ಮಾತನಾಡಿದರು. ಪೌರ ಕಾರ್ಮಿಕರು ಪಟ್ಟಣವನ್ನು ಸ್ವಚ್ಛಗೊಳಿಸಲು ಬೆಳಗಿನ ಜಾವ ಆಗಮಿಸುತ್ತಾರೆ.
ಚಳಿಯಿಂದ ರಕ್ಷಣೆ ಮಾಡಿಕೊಳ್ಳಲು ಸ್ವೆಟರ್ ನೀಡಲಾಗುತ್ತೆ. ಇವರನ್ನೇ ಅವಲಂಬಿಸಿದ ಕುಟುಂಬ ಇದೆ. ಆರೋಗ್ಯದಲ್ಲಿ ವ್ಯತ್ಯಾಸವಾದರೆ ಕುಟುಂಬ ನಿರ್ವಹಣೆ ಕಷ್ಟ ಎಂದರು.
ಪುರಸಭೆ ಮುಖ್ಯಾಧಿಕಾರಿ ಎಂ.ಕೆ.ಮುಗಳಿ, ಸದಸ್ಯ ದೀಪಕ್ ಸಾ ಕಠಾರೆ, ತಾಪಂ ಮಾಜಿ ಸದಸ್ಯ ದೇವೇಂದ್ರ, ಆರೋಗ್ಯ ಅಧಿಕಾರಿ ವಿಜಯಲಕ್ಷ್ಮೀ, ಗುಂಡರು ಹನುಮಂತಪ್ಪ ಇತರರಿದ್ದರು.