ವಿತ್ತ ಸಚಿವೆ ಮತ್ತೆ ವಿಜಯನಗರ ಪ್ರವಾಸ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಲೈಯಿಂಗ್ ಫೌಂಡೇಷನ್ ಸ್ಟೋನ್ ಆಪ್ ರಂಗಮAದಿರದ ಭೂಮಿ ಪೂಜೆ ಮಾಡುವ ಸ್ಥಳವನ್ನು ಡಿವೈಎಸ್‌ಪಿ ಮುರಳಿಧರ್ ನೇತೃತ್ವದಲ್ಲಿ ಪರಿಶಿಲನೆ ನಡೆಸಲಾಯಿತು. ಸಿಪಿಐಗಳಾದ ಹುಲಗಪ್ಪ, ಗೌಸ್, ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನ ನಿರ್ದೇಶಜ ರವಿಕುಮಾರ್ ಇತÀರರಿದ್ದರು. 
ವಿಜಯನಗರ

ವಿತ್ತ ಸಚಿವೆ ಮತ್ತೆ ವಿಜಯನಗರ ಪ್ರವಾಸ

ಮಂಜುನಾಥ

ಪ್ರಮುಖ ಮುಖ್ಯಾಂಶಗಳು

  • ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ/ ಜಿಲ್ಲಾಡಳಿತ, ಪೊಲೀಸ್ ಇಲಾಖೆಯಿಂದ ಸಿದ್ದತೆೆ
ಹೊಸಪೇಟೆ: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜೂ.05ರಂದು ವಿಜಯನಗರ ಜಿಲ್ಲೆ ಪ್ರವಾಸ ಕೈಗೊಂಡಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಸಚಿವರ ಪ್ರವಾಸದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಭರದ ಸಿದ್ಧತೆಗಳನ್ನು ಮಾಡಿಕೊಂಡಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸಂಸದರ ಅನುದಾನದಡಿ ಒಟ್ಟು 5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಲೈಯಿಂಗ್ ಫೌಂಡೇಷನ್ ಸ್ಟೋನ್ ಆಪ್ ರಂಗಮAದಿರದ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಎಸ್‌ಬಿಐ ಬ್ಯಾಂಕ್‌ನ ಸಿಎಸ್‌ಆರ್ ಅನುದಾನದಡಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ 5 ಪ್ರಮುಖ ಕೆರೆಗಳ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ. ವಿಶ್ವ ಪರಿಸರ ದಿನಾಚರಣೆಯ ನಿಮಿತ್ತ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಯಲ್ಲಿ 10 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ಬೃಹತ್ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವರು ಚಾಲನೆ ನೀಡಲಿದ್ದಾರೆ.

ವರ್ಷದಲ್ಲಿ 3ನೇ ಬಾರಿ ಭೇಟಿ

ವಿಶೇಷವೆಂದರೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇವಲ ಒಂದು ವರ್ಷದ ಅವಧಿಯಲ್ಲಿ ಮೂರನೇ ಬಾರಿಗೆ ಈ ಭಾಗಕ್ಕೆ ಭೇಟಿ ನೀಡುತ್ತಿದ್ದಾರೆ. ಮೊದಲ ಭೇಟಿಯ ವೇಳೆ ಹಂಪಿ ಪ್ರವಾಸ ಹಾಗೂ ಗುಡೇಕೋಟೆಯಲ್ಲಿ ಹುಣಸೆ ಸಂಸ್ಕರಣಾ ಘಟಕಕ್ಕೆ ಚಾಲನೆ ನೀಡಿದ್ದರು. ಎರಡನೇ ಭೇಟಿಯಲ್ಲಿ ತಾಲೂಕಿನ ವಿಜಯಶ್ರೀ ಹೆರಿಟೇಜ್‌ನಲ್ಲಿ ಕೇಂದ್ರ ಹಣಕಾಸು ಇಲಾಖೆ ಅಧಿಕಾರಿಗಳ ಮಹತ್ವದ ಸಭೆ ನಡೆಸಿದರು. ಮರು ದಿನ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಅತ್ಯಾಧುನಿಕ ಎಐ ಲ್ಯಾಬ್ ಉದ್ಘಾಟಿಸಿದ್ದರು. ಸಚಿವರ ಈ ಸರಣಿ ಭೇಟಿಗಳು ಜಿಲ್ಲೆಯ ಸಾಂಸ್ಕೃತಿಕ, ಪರಿಸರ ಮತ್ತು ಮೂಲಸೌಕರ್ಯ ವಲಯದ ಅಭಿವೃದ್ಧಿಗೆ ಹೊಸ ವೇಗ ನೀಡಲಿವೆ ಎಂದು ಸ್ಥಳೀಯರು ಆಶಯವಾಗಿದೆ.