ಹೊಸಪೇಟೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಬಿದ್ದರಿರುವ ಬೆಂಕಿಗೆ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು. 
ವಿಜಯನಗರ

ತಾಲೂಕು ಪಂಚಾಯಿತಿ ಕಚೇರಿಗೆ ಬೆಂಕಿ

ಪ್ರಮುಖ ಮುಖ್ಯಾಂಶಗಳು

  • ಹಳೆ ದಾಖಲೆಗಳಯ ಮತ್ತು ಪೀಠೋಪಕರಣಗಳು ಬೆಂಕಿಗಾಹುತಿ
ಹೊಸಪೇಟೆ: ನಗರದ ತಾಲೂಕು ಪಂಚಾಯಿತಿ ಕಚೇರಿಗೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಇಲ್ಲಿನ ಸಂಡೂರು ರಸ್ತೆಯಲ್ಲಿನ ತಾಲೂಕು ಪಂಚಾಯಿತಿ ಕಚೇರಿಯ ಮೇಲ್ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಹಳೆ ದಾಖಲೆಗಳಯ ಮತ್ತು ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿವೆ ಎಂದು ಹೇಳಲಾಗುತ್ತಿದೆ. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಎಎಸ್ಪಿ ಮಂಜುನಾಥ, ತಹಸೀಲ್ದಾರ್ ಶೃತಿ ಎಂ.ಮಳ್ಳಪ್ಪಗೌಡ್ರ್ ಸೇರಿ ಇತರೆ ಅಧಿಕಾರಿಗಳು ಸ್ಥಳಕ್ಕೆ ಬೇಟಿ‌ನೀಡಿ ಪರಿಶೀಲನೆ ನಡೆಸಿದರು.