ಹೊಸಪೇಟೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ರೈತ ಮುಖಂಡ ಚೌದ್ರಿಚರಣ್ ಸಿಂಗ್ ಹುಟ್ಟಿದ ದಿನದ ನಿಮಿತ್ತ ಪುಷ್ಪ ನಮನ ಸಲ್ಲಿಸಿದರು.
- ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಟಿ.ನಾಗರಾಜ್ ಆಗ್ರಹ
ಹೊಸಪೇಟೆ: ರೈತ ಮುಖಂಡ ಚೌದ್ರಿಚರಣ್ ಸಿಂಗ್ ಹುಟ್ಟಿದ ದಿನದ ನಿಮಿತ್ತ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ್ ಬಣ್ಣ) ಯಿಂದ ನಗರದ ಗಾಂಧಿಚೌಕ್‌ನಲ್ಲಿ ರೈತ ದಿನಾಚರಣೆ ನಿಮಿತ್ತ ಆಚರಿಸಲಾಯಿತು.
ಜಿಲ್ಲಾಧ್ಯಕ್ಷ ಟಿ.ನಾಗರಾಜ್ ಮಾತನಾಡಿ, ಯಾವುದೇ ಸರ್ಕಾರ ಬಂದಲ್ಲಿ ರೈತರಿಗೆ ಅನಾನುಕೂಲಗಳೇ ಹೆಚ್ಚು. ರೈತರ ಪರವಾಗಿ ನಿಷ್ಠೆಯಿಂದ ಕೆಲಸ ಮಾಡುವುದು ಬಹಳಷ್ಟು ಕಡಿಮೆ. 2028ರ ಚುನಾವಣೆಯಲ್ಲಿ ರೈತರೇ ಅಧಿಕಾರಕ್ಕೆ ಬಂದಲ್ಲಿ ರೈತರಿಗೆ ಆಗುವ ತೊಂದರೆಗಳನ್ನು ತಪ್ಪಿಸಬಹುದು. ಸ್ಥಳೀಯ ಸಕ್ಕರೆ ಕಾರ್ಖಾನೆಯು ಮುಚ್ಚಿ ದಶಕ ಕಳೆಯುತ್ತಿದೆ. ಶಾಸಕರಗೂ, ಸಚಿವರಿಗೂ ಮತ್ತು ಮುಖ್ಯಮಂತ್ರಿಗೂ ಹಲವು ಬಾರಿ ಮನವಿ ಪತ್ರ ಸಲ್ಲಿಸಿದರು, ಈ ವರೆಗೆ ಯಾವುದೇ ಪ್ರಯೋಜನೆ ಆಗಿಲ್ಲ. ಆದರೆ ಒಂದು ಟನ್ ಕಬ್ಬಿಗೆ 800 ರಿಂದ ಸಾವಿರ ರೂ. ವರೆಗೆ ನಷ್ಟ ಆಗುತ್ತಿದೆ. ಸುಮಾರು 120 ರಿಂದ 180ಕಿ.ಮೀ ವರೆಗೆ ಕಬ್ಬು ಸಾಗಾಟ ಮಾಡುತ್ತಿರುವುದು ಇಲ್ಲಿನ ರೈತರಿಗೆ ಬಹಳಷ್ಟು ಆರ್ಥಿಕ ಹೊರೆಯಾಗುತ್ತಿದ್ದು, ಸಂಬAಧಪಟ್ಟ ಅಧಿಕಾರಿಗಳು ಸ್ಥಳಿಯ ಸಕ್ಕರೆ ಕಾರ್ಖಾನೆಯನ್ನು ಪುನರ್ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕಾರ್ಯಧ್ಯಕ್ಷ ಎಂ.ಜಡಿಯಪ್ಪ, ತಾಲೂಕು ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ, ಪ್ರಮುಖರಾದ ಖಾಜಾ ನಿಯಾಜ್, ಜಹಿರುದ್ದೀನ್, ಆರ್.ಆರ್.ತಾಯಪ್ಪ, ವಿ.ಗಾಳೆಪ್ಪ, ಅಂಕ್ಲೇಶ್, ಬಸವರಾಜ, ಸುರೇಶ, ವೀರೇಶ್, ರಾಮಾಂಜಿನಿ, ಪಿ.ಕೆ.ಹಳ್ಳಿ ರಾಜಶೇಖರ, ಭುವನಹಳ್ಳಿ ಗೋವಿಂದಪ್ಪ ಇತರರಿದ್ದರು.