ಹಂಪಿಯಲ್ಲಿ ಶನಿವಾರ ಪಂಪಾ ವಿರೂಪಾಕ್ಷೇಶ್ವರ ತೆಪ್ಪೋತ್ಸವ ನಡೆಯಿತು.
ಹೊಸಪೇಟೆ: ದಕ್ಷಿಣ ಕಾಶಿ ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇಗುಲದ ಮಕ್ಕದ ಮನ್ಮಥ ಹೊಂಡದಲ್ಲಿ ಶನಿವಾರ ರಾತ್ರಿ ಪಂಪಾ ವಿರೂಪಾಕ್ಷೇಶ್ವರ ತೆಪ್ಪೋತ್ಸವ ಸಂಭ್ರಮದಿAದ ಜರುಗಿತು.
ಶ್ರೀ ವಿದ್ಯಾರಣ್ಯ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ ಮನ್ಮಥ ಹೊಂಡದಲ್ಲಿ ದೇವತೆಗಳ ಉತ್ಸವ ಮೂರ್ತಿಗಳನ್ನು ತೆಪ್ಪದಲ್ಲಿ ಕೂರಿಸಿ ಸಂಪ್ರದಾಯದAತೆ ಪೂಜೆ ಸಲ್ಲಿಸಲಾಯಿತು. ಈ ಧಾರ್ಮಿಕ ಮಹೋತ್ಸವದಲ್ಲಿ ನಗರ ಸೇರಿದಂತೆ, ಕಮಲಾಪುರ, ಕಡ್ಡಿರಾಂಪುರ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಗ್ರಾಮಸ್ಥರು ಶ್ರೀ ವಿರೂಪಾಕ್ಷೇಶ್ವರ ಸ್ವಾಮಿತ ದರ್ಶನ ಪಡೆದು ತೆಪ್ಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.