ಹಗರಿಬೊಮ್ಮನಹಳ್ಳಿಯಲ್ಲಿ ಗಣರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಶಾಸಕ ಕೆ.ನೇಮಿರಾಜ್‌ನಾಯ್ಕ ಮಾತನಾಡಿದರು. ತಹಸೀಲ್ದಾರ್ ಆರ್.ಕವಿತಾ, ತಾ.ಪಂ.ಇಒ ವಿಶ್ವನಾಥ, ಪುರಸಭೆ ಸದಸ್ಯ ದೀಪಕ್ ಸಾ ಕಠಾರೆ ಇತರರಿದ್ದರು.
- ಶಾಸಕ ನೇಮಿರಾಜ್ ನಾಯ್ಕ ಸೂಚನೆ
- ಗಣರಾಜ್ಯೋತ್ಸವ ಪೂರ್ವಭಾವಿ ಸಭೆ
ಹಗರಿಬೊಮ್ಮನಹಳ್ಳಿ: ವಿವಿಧ ಇಲಾಖೆಗಳಿಗೆ ನೀಡಿರುವ ಜವಾಬ್ದಾರಿಗಳನ್ನು ಸಮನ್ವಯದಿಂದ ನಿಭಾಯಿಸಿ ಗಣರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ಶಾಸಕ ಕೆ.ನೇಮಿರಾಜ್ ನಾಯ್ಕ ಸೂಚಿಸಿದರು.
ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ವಿವಿಧ ಇಲಾಖೆಗಳು ತಲಾ ಒಂದೊಂದು ಜವಾಬ್ದಾರಿ ತೆಗೆದುಕೊಂಡು ಒಗ್ಗೂಡಿ ಕಾರ್ಯನಿರ್ವಹಿಸಿದರೆ ಕಾರ್ಯಕ್ರಮ ಯಶಸ್ವಿಯಾಗುತ್ತದೆ. ಕಾರ್ಯಕ್ರಮದಲ್ಲಿ ಯೋಧರು, ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಬೇಕು. ಅಂದು ಬೆಳಗ್ಗೆ ಕಾಲೇಜ್ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಉಪಾಹಾರ ನೀಡಲು ಕ್ರಮವಹಿಸುತ್ತೇನೆ. ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಜತೆಗೆ ಪೊಲೀಸರನ್ನು ನಿಯೋಜಿಸಿ ಎಂದರು.
ತಹಸೀಲ್ದಾರ್ ಆರ್.ಕವಿತಾ ಮಾತನಾಡಿ, ಸಭೆಯಲ್ಲಿ ಚರ್ಚಿಸಿದಂತೆ ಎಲ್ಲ ಇಲಾಖೆಗಳು ನಿರ್ಲಕ್ಷೃ ತೋರದೆ ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸಬೇಕೆಂದರು. ತಾ.ಪಂ. ಇಒ ವಿಶ್ವನಾಥ, ಪುರಸಭೆ ಸದಸ್ಯ ದೀಪಕ್‌ಸಾ ಕಠಾರೆ, ಉಪ ತಹಸೀಲ್ದಾರ್ ಶಿವಕುಮಾರ್ ಗೌಡ, ಪುರಸಭೆ ಮುಖ್ಯಾಧಿಕಾರಿ ಎಂ.ಕೆ.ಮುಗಳಿ, ತಾ.ಪಂ. ಎಡಿ (ನರೇಗಾ) ರಮೇಶ್ ಮಹಾಲಿಂಗಪುರ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದ್ದರು.