ಹೊಸಪೇಟೆಯಲ್ಲಿ ಮಂಗಳವಾರ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ ವಾಹನವನ್ನು ವಶಕ್ಕೆ ಪಡೆದ ಅಧಿಕಾರಿಗಳು. ಆಹಾರ ನಿರೀಕ್ಷಕ ಅಜೀತ್, ಎಎಸ್ ಐ ಅಬ್ದುಲ್, ಎಚ್‌ಪಿಸಿ ನಾಗಭೂಷಣ್ ಇತರರಿದ್ದರು. 
ವಿಜಯನಗರ

ಅಕ್ರಮ ಪಡಿತರ ವಶ

ಮಂಜುನಾಥ
ಹೊಸಪೇಟೆ: ನಗರದ ಸಂಡೂರು ರಸ್ತೆಯ ಬಳಿ ಸಂಗ್ರಹಿಸಿಟ್ಟಿದ್ದ ಅಕ್ರಮ ಪಡಿತರ ಅಕ್ಕಿಯನ್ನು ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿಕೊಂಡು ಇಲ್ಲಿನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದರು.
ಆಹಾರ ನಿರೀಕ್ಷಕ ಅಜೀತ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಪಡಿತರ ಅಕ್ಕಿಯನ್ನು ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಂಗ್ರಹಿಸಿದ 34,843 ರೂ. ಮೌಲ್ಯದ 15.30 ಕ್ವಿಂಟಲ್ ಅಕ್ಕಿಯನ್ನು ವಶಕ್ಕೆ ಪಡೆಯುಲಾಗಿದೆ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.