ಹೊಸಪೇಟೆ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ಜಿ.ಜಗದೀಶ್ ಕೆಡಿಪಿ ಸಭೆ ನಡೆಸಿದರು. ಜಿಪಂ ಸಿಇಒ ನೊಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ, ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಯೋಜನಾ ನಿರ್ದೇಶಕ ಅನ್ನದಾನಸ್ವಾಮಿ, ಗ್ರಾಮೀಣ ಕುಡಿವ ಮತ್ತು ನೈರ್ಮಲ್ಯ ಇಲಾಖೆ ಇಇ ಎಸ್.ದೀಪಾ, ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ ಇತರರಿದ್ದರು. 
ವಿಜಯನಗರ

ಯೋಜನೆಗಳ ಅನುಷ್ಠಾನ ವಿಳಂಬ ಸಲ್ಲದು

ಮಂಜುನಾಥ

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ಜಿ ಜಗದೀಶ್ ಎಚ್ಚರಿಕೆ
ಹೊಸಪೇಟೆ: ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಮತ್ತು ನೀರು ಸರಬರಾಜು ಯೋಜನೆಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಖಾಸಗಿ ವ್ಯಕ್ತಿಗಳು ಅಥವಾ ಸಂಸ್ಥೆಗಳು ಲಾಭದ ಉದ್ದೇಶದಿಂದಲೇ ಕೆಲಸ ಮಾಡುತ್ತಾರೆ. ಆದ್ದರಿಂದ ಯಾವುದೇ ಕಾಮಗಾರಿ ಅನುಷ್ಠಾನಗೊಳಿಸಬೇಕಾದರೆ ಗುಣಮಟ್ಟ ಕಾಯ್ದುಕೊಳ್ಳಬೇಕು. ಕೆಲಸದಲ್ಲಿ ವಿಳಂಬವಾದರೆ ಅಥವಾ ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಹಲವು ಕಾಮಗಾರಿಗಳು ಅನುದಾನದ ಕೊರತೆ ಹಾಗೂ ನಾನಾ ಕಾರಣಗಳಿಂದ ಕುಡಿವ ನೀರು ಸರಬರಾಜು ಯೋಜನೆ ಮತ್ತು ಇತರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯಲ್ಲಿ ವಿಳಂಬವಾಗುತ್ತಿವೆ. ಕೂಡಲೇ ಸಂಬAಧಪಟ್ಟ ಮೇಲುಸ್ತುವಾರಿ ಅಧಿಕಾರಿಗಳೊಂದಿಗೆ ಅಥವಾ ನಮ್ಮೊಂದಿಗೆ ಪತ್ರ ವ್ಯವಹಾರ ನಡೆಸಿ ಪರಿಹಾರ ಕಂಡುಕೊಳ್ಳಬೇಕು. ಅದಷ್ಟೇ ಅಲ್ಲದೇ ಅಧಿಕಾರಿಗಳೊಂದಿಗೆ ಚರ್ಚಿಸಿ ಬಾಕಿ ಇರುವ ಬಿಲ್ ಪಾವತಿ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಿಕೊಂಡು ಯೋಜನೆಗಳ ಚಾಲನೆಗೆ ತರಬೇಕು. ವಿಜಯನಗರ ಜಿಲ್ಲೆಯಾಗಿದ್ದರು ಸಹ ಇನ್ನೂ ಕೆಲವು ಕೇಚೇರಿಗಳು ಅಖಂಡ ಬಳ್ಳಾರಿ ಜಿಲ್ಲೆಯಲ್ಲಿಯೇ ಕಾರ್ಯ ನಿರ್ವಹಿಸುತ್ತಿವೆ. ಇದರಿಂದ ಸಾರ್ವಜನಿಕರಿಗೆ ಸಕಾಲದಲ್ಲಿ ಗುಣಮಟ್ಟದ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ.
ಸಂಬAಧಪಟ್ಟ ಅಧಿಕಾರಿಗಳು ಇಲಾಖೆಯ ಮುಖ್ಯಸ್ಥರೊಂದಿಗೆ ಪತ್ರ ವ್ಯವಹಾರ ನಡೆಸಿ ತಮಗೆ ಬೇಕಾದ ಕಟ್ಟಡ, ಕಚೇರಿ ಸ್ಥಳಾಂತರಕ್ಕೆ ಕ್ರಮವಹಿಸಬೇಕು. ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ವಿವಿಧ ಇಲಾಖೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಬಿಡುಗಡೆಯಾದ ಅನುದಾನವನ್ನು ದುರ್ಬಳಕೆ ಮಾಡದೇ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ಆಯ್ದ ಐದು ಸ್ಥಳಗಳಲ್ಲಿ ಮಕ್ಕಳಿಗೆ ಆಟೋಟಕ್ಕೆ ಪೂರಕವಾಗಿರುವಂತೆ ಕ್ರೀಡಾ ಪರಿಕರ ಅಳವಡಿಸುವ ಮೂಲಕ ಉತ್ತಮವಾದ ಮಾದರಿ ಅಂಗನವಾಡಿ ಕಟ್ಟಡ ನಿರ್ಮಿಸಬೇಕು ಎಂದರು.