ಕೊಟ್ಟೂರು ಬಸ್ ನಿಲ್ದಾಣ ಬಳಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಕೊಟ್ಟೂರು: ಪಶ್ಚಿಮ ಬಂಗಾಳ, ಆಸ್ಸಾಂ ಹಾಗೂ ಪುದುಚೇರಿ ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಬಸ್ ನಿಲ್ದಾಣದ ಬಳಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ನಗರ ಘಟಕದ ಅಧ್ಯಕ್ಷ ಅಂಗಡಿ ಪಂಪಾಪತಿ ಮಾತನಾಡಿ ಈ ಗೆಲುವು ಬಿಜೆಪಿ ಕಾರ್ಯಕರ್ತರ ಪರಿಶ್ರಮದ ಫಲವಾಗಿದೆ. 2028ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಮಲ ಅರಳಿಸಲು ಕಾರ್ಯಕರ್ತರಿಗೆ ಪ್ರೇರಣೆ ನೀಡಿದೆ ಎಂದರು.
ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಬಿ.ಆರ್.ವಿಕ್ರಮ್, ನಗರ ಘಟಕದ ಮಾಜಿ ಅಧ್ಯಕ್ಷ ವೀರೇಶಗೌಡ, ಪಪಂ ಮಾಜಿ ಉಪಾಧ್ಯಕ್ಷ ಜಿ.ಸಿದ್ದಯ್ಯ, ಪಪಂ ಮಾಜಿ ಸದಸ್ಯ ಬೋರವೆಲ್ ತಿಪ್ಪೇಸ್ವಾಮಿ, ಕಾರ್ಯಕರ್ತರಾದ ಕೋನಾಪುರ ಬಸವರಾಜ್, ಚಪ್ಪರದಹಳ್ಳಿ ಬಸವರಾಜ್, ಗಂಗನಹಳ್ಳಿ ಸಿದ್ದಣ್ಣ,ಮಲ್ಲಿಕಾರ್ಜುನಸ್ವಾಮಿ,ವಿಷ್ಣು, ಬಿ.ವಿಕಾಸ್, ನವೀನ್, ರುದ್ರೇಶ ಇತರರಿದ್ದರು.