ಕಮಲಾಪುರದ ಬಾಲಕರ ಪ್ರೌಢ ಶಾಲೆಯಲ್ಲಿ ಬುಧವಾರ ನಶಾ ಮುಕ್ತ ಭಾರತ ಅಭಿಯಾನ, ಪೋಕ್ಸೋ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕುರಿತು ಅರಿವು ಕಾರ್ಯಕ್ರಮದಲ್ಲಿ ಜಿಲ್ಲಾ ಮಿಷನ್ ಶಕ್ತಿ ಸಂಯೋಜಕಿ ವಿದ್ಯಾಬಾಯಿ ಮಾತನಾಡಿದರು. ತಂಬಾಕು ನಿಯಂತ್ರಣ ಕೋಶದ ಭೋಜರಾಜ್, ಮುಖ್ಯಶಿಕ್ಷಕಿ ಸುರೇಖ, ಜಿಲ್ಲಾ ಮಹಿಳಾ ಸಬಲೀಕಣ ಘಟಕದ ಲಿಂಗ ತಜ್ಞೆ ಅನ್ನಪೂರ್ಣ ಇತರರಿದ್ದರು. 
ವಿಜಯನಗರ

ನಶಾ ಮುಕ್ತ ಭಾರತಕ್ಕೆ ಕೈಜೋಡಿಸಿ

ಪ್ರಮುಖ ಮುಖ್ಯಾಂಶಗಳು

  • ಕಮಲಾಪುರದಲ್ಲಿ ಜಿಲ್ಲಾ ಮಿಷನ್ ಶಕ್ತಿ ಸಂಯೋಜಕಿ ವಿದ್ಯಾಬಾಯಿ ಕರೆ
ಹೊಸಪೇಟೆ: ತಾಲುಕಿನ ಕಮಲಾಪುರದ ಬಾಲಕರ ಪ್ರೌಢ ಶಾಲೆಯಲ್ಲಿ ಬುಧವಾರ ನಶಾ ಮುಕ್ತ ಭಾರತ ಅಭಿಯಾನ, ಪೋಕ್ಸೋ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಮಿಷನ್ ಶಕ್ತಿ ಸಂಯೋಜಕಿ ವಿದ್ಯಾಬಾಯಿ ಮಾತನಾಡಿ, ಆರೋಗ್ಯವಂತ ಮತ್ತು ಸುರಕ್ಷಿತ ಸಮಾಜ ನಿರ್ಮಾಣದ ಉದ್ದೇಶದಿಂದ ಈ ಅರಿವು ಮತ್ತು ಜಾಗೃತರಾಗಬೇಕು. ಯುವ ಪೀಳಿಗೆಯನ್ನು ಮಾದಕ ದ್ರವ್ಯಗಳ ವ್ಯಸನದಿಂದ ಮುಕ್ತಗೊಳಿಸುವುದು ದೇಶದ ಪ್ರಗತಿಗೆ ಅತ್ಯಗತ್ಯ. ಇದಕ್ಕಾಗಿ ನಶಾ ಮುಕ್ತ ಭಾರತ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ತಂಬಾಕು ನಿಯಂತ್ರಣ ಕೋಶದ ಭೋಜರಾಜ್ ಮಾತನಾಡಿ, ಅಪ್ರಾಪ್ತ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವಲ್ಲಿ ಪೋಕ್ಸೋ ಕಾಯ್ದೆಯು ಅತ್ಯಂತ ಕಠಿಣವಾಗಿದ್ದು, ಸಾರ್ವಜನಿಕರು ಇದರ ಬಗ್ಗೆ ಸೂಕ್ತ ಮಾಹಿತಿ ಹೊಂದಿರಬೇಕು ಎಂದರು. ಸಮಾಜಕ್ಕೆ ಕಂಟಕವಾಗಿರುವ ಬಾಲ್ಯ ವಿವಾಹ ಕಾನೂನುಬಾಹಿರ ಹಾಗೂ ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದರು.