ಹೊಸಪೇಟೆಯಲ್ಲಿ ಶುಕ್ರವಾರ ಪಟ್ಟಣ ಠಾಣೆ ಪಿಐ ಫೈಜುಲ್ಲ ಎಂ.ಡಿ. ಅವರಿಗೆ ಮನವಿ ಸಲ್ಲಿಸಿದರು. ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್, ಬಿಜೆಪಿ ಮಂಡಲ ಅಧ್ಯಕ್ಷ ಶಂಕರ್ ಮೇಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಮಧುರಚನ್ನ ಶಾಸ್ತ್ರಿ ಹಿರೇಮಠ, ಯುವ ಮೋರ್ಚಾ ಮಂಡಲ ಅಧ್ಯಕ್ಷ ಎಚ್.ರಾಘವೇಂದ್ರ ಇತರರಿದ್ದರು. 
ವಿಜಯನಗರ

ಪ್ರಚೋದನಕಾರಿ ಭಾಷಣ ಮಾಡಿದ ಖರ್ಗೆಗೆ ಬಂಧಿಸಿ

ಮಂಜುನಾಥ

ಪ್ರಮುಖ ಮುಖ್ಯಾಂಶಗಳು

  • ಹೊಸಪೇಟೆಯಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ಒತ್ತಾಯ
ಹೊಸಪೇಟೆ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಚೋದನಕಾರಿ ಭಾಷಣ ಮಾಡುವುದರ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡಿದ್ದಾರೆ ಕೂಡಲೆ ಬಂಧಿಸಬೇಕು ಎಂದು ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಪಟ್ಟಣದ ಠಾಣೆಗೆ ದೂರು ನೀಡಿ ಒತ್ತಾಯಿಸಿದರು.
ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್ ಮಾತನಾಡಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಭಾಷಣ ಮಾಡುತ್ತಾ, ಕುರಾನ್‌ನಲ್ಲಿ ಬರೆದಿದೆ. ನಮಾಜ್ ಮಾಡುವ ಸಂದರ್ಭದಲ್ಲಿ ವಿಷ ಸರ್ಪ ಕಂಡರೆ ಅದನ್ನು ಕೊಲ್ಲಬೇಕು. ಅರ್ ಎಸ್ ಎಸ್ ಹಾಗೂ ಬಿಜೆಪಿ ಅದೇ ರೀತಿಯ ವಿಷಸರ್ಪವು, ನೀವು ಅದನ್ನು ಕೊಲ್ಲದಿದ್ದರೆ ಬದುಕುವುದಿಲ್ಲ ಎಂದು ಮುಸಲ್ಮಾನರಿಗೆ ಆರ್ ಎಸ್ ಎಸ್ ಸದಸ್ಯರನ್ನು ಕೊಲ್ಲಬೇಕು ಎಂದು ಪ್ರಚೋದಿಸಿದ್ದಾರೆ.
ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಅತ್ಯಂತ ಪ್ರಮುಖ ಜವಾಬ್ದಾರಿಯನ್ನು ಹೊಂದಿದ್ದಾರೆ ಮತ್ತು ಅಲ್ಪಸಂಖ್ಯಾತರ ಓಲೈಕೆಯನ್ನು ಸದಾ ಮಾಡುವವರು. ಇಂತಹ ವ್ಯಕ್ತಿಯು ಮಾಡಿರುವ ಬೇಜವಾಬ್ದಾರಿ ಪ್ರಚೋದನೆಯು ದೇಶದಲ್ಲಿರುವ ಲಕ್ಷಾಂತರ ಬಿಜೆಪಿ ಮತ್ತು ಆರೆಸ್ಸೆಸ್ ಸದಸ್ಯರ ಜೀವಕ್ಕೆ ಅಪಾಯವೊಡ್ಡಿದೆ. ಅವರು ಅಸ್ಸಾಂನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದು, ದೇಶಾದ್ಯಂತ ಇರುವ ಸಂಘಪರಿವಾರದ ಮೇಲೆ ಮಾಡಿರುವ ದಾಳಿಯಾಗಿದೆ. ಇದರ ಪರಿಣಾಮ ದೇಶವ್ಯಾಪಿ ಬೀರುವ ಸಂಭವವನ್ನು ತಳ್ಳಿಹಾಕಲಾಗದು. ಇವರ ಹೇಳಿಕೆಯು ಮತಿಗೇಡಿಗಳಿಗೆ ಉತ್ತೇಜನ ನೀಡಿ ನಮ್ಮ ಕಾರ್ಯಕರ್ತರ ಮೇಲೆ ದಾಳಿ ಸಂಭವಿಸಬಹುದಾಗಿದೆ. ಆತಂಕದ ವಿಷಯವೆಂದರೆ ಖರ್ಗೆಯವರು ಇಸ್ಲಾಂ ಪವಿತ್ರ ಗ್ರಂಥವಾದ ಕುರಾನ್ ಉಲ್ಲೇಖಿಸಿ ಹತ್ಯೆ ಮಾಡುವುದು ನ್ಯಾಯಾ ಎಂದಿರುವುದು ಸಮುದಾಯದ ಮೂಲಭೂತವಾದಿಗಳಿಗೆ ಇದರಿಂದ ಹತ್ಯೆ ಮಾಡಲು ಉತ್ತೇಜನ ನೀಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಪ್ರಚೋದನೆಯ ಪರಿಣಾಮ ಉಂಟಾಗಿರುವ ಸೂಕ್ಷ್ಮ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಕಾರ್ಯಕರ್ತರನ್ನು ರಕ್ಷಿಸಲು ಭದ್ರತಾ ವ್ಯವಸ್ಥೆ ಮಾಡಬೇಕು ಜತೆಗೆ
ಲಕ್ಷಾಂತರ ಕಾರ್ಯಕರ್ತರನ್ನು ಕೊಲ್ಲಲು ಹೇಳಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.