ಹಂಪಿಯಲ್ಲಿ ಚಿರತೆ ಕಾಣಿಸಿಕೊಂಡ ದೃಶ್ಯ ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 
ವಿಜಯನಗರ

ಹಂಪಿಯಲ್ಲಿ ನಾಯಿ ಹೊತ್ತೊಯ್ದ ಚಿರತೆ

ಮಂಜುನಾಥ

ಪ್ರಮುಖ ಮುಖ್ಯಾಂಶಗಳು

  • ಪ್ರವಾಸಿಗರಲ್ಲಿ ಆತಂಕ, ಎಚ್ಚರ ವಹಿಸುವಂತೆ ಒತ್ತಾಯ
*
ಹೊಸಪೇಟೆ: ಐತಿಹಾಸಿಕ ತಾಣ ಹಂಪಿ ವಿರೂಪಾಕ್ಷೇಶ್ವರ ದೇಗುಲದ ಬಳಿ ಭಾನುವಾರ ತಡರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು, ಪ್ರವಾಸಿಗರು ಹಾಗೂ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಹಂಪಿ ಉತ್ಸವದ ಸಂಭ್ರದಲ್ಲಿ ಜನರು ಶ್ರೀ ವಿರೂಪಾಕ್ಷೇಶ್ವರ ದೇಗುಲದ ಕೂಗಳತೆ ದೂರದ ಜನತಾ ಪ್ಲಾಟ್‌ನಲ್ಲಿ ಚಿರತೆ ಕಾಣಿಸಿಕೊಂಡಿದೆ. ಸದಾ ಪ್ರವಾಸಿಗರು ಮತ್ತು ಸ್ಥಳೀಯರಿಂದ ಜನನಿಬಿಡವಾಗಿರುವ ಈ ಪ್ರದೇಶದಲ್ಲಿ ಚಿರತೆ ಬಂದಿರುವುದು ಜನರನ್ನು ಬೆಚ್ಚಿಬೀಳಿಸಿದೆ.
ಭಾನುವಾರ ರಾತ್ರಿ ಚಿರತೆಯು ಜನತಾ ಪ್ಲಾಟ್‌ನ ರಸ್ತೆಯಲ್ಲಿ ಓಡಾಡುತ್ತಿರುವುದು ಹಾಗೂ ನಾಯಿಯನ್ನು ಹೊತ್ತೊಯ್ದ ದೃಶ್ಯವು ಸ್ಥಳೀಯ ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸೋಮವಾರ ಬೆಳಿಗ್ಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸಿದ ಮನೆಯವರು ಮತ್ತು ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.
ಹಂಪಿಯು ಕಲ್ಲುಬಂಡೆಗಳಿAದ ಕೂಡಿದ ಪ್ರದೇಶವಾದ್ದರಿಂದ ಚಿರತೆಗಳು ಬೆಟ್ಟಗಳಲ್ಲಿ ವಾಸಿಸುವುದು ಸಾಮಾನ್ಯ. ಆದರೆ, ಈಗ ನೇರವಾಗಿ ಜನವಸತಿ ಪ್ರದೇಶಕ್ಕೆ ನುಗ್ಗಿರುವುದು ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆAದು ಹಂಪಿ ನಿವಾಸಿಗಳು ಆಗ್ರಹಿಸಿದ್ದಾರೆ.
16 ಮಂಜು 01
===========