ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಅಪರ ಜಿಲ್ಲಾಧಿಕಾರಿ ಇ ಬಾಲಕೃಷ್ಣಪ್ಪ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಪೂರ್ವ ಸಿದ್ಧತಾ ಸಭೆ ನಡೆಸಿದರು. ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ, ಎಸ್‌ಎಸ್‌ಎಲ್‌ಸಿ ಜಿಲ್ಲಾ ನೋಡಲ್ ಅಧಿಕಾರಿ ಎಚ್.ಎಂ.ಹುಲಿಬAಡಿ, ಬಿಇಒ ಶೇಖರಪ್ಪ ಹೊರಪೇಟೆ ಇತರರಿದ್ದರು. 
ವಿಜಯನಗರ

ಪಾರದರ್ಶಕವಾಗಿ ಪರೀಕ್ಷೆ ನಡೆಯಲಿ

ಮಂಜುನಾಥ

ಪ್ರಮುಖ ಮುಖ್ಯಾಂಶಗಳು

  • ಅಪರ ಜಿಲ್ಲಾಧಿಕಾರಿ ಇ ಬಾಲಕೃಷ್ಣಪ್ಪ ಸೂಚನೆ/ಮೇ 18 ರಿಂದ 25ರ ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ2
ಹೊಸಪೇಟೆ: ಎಸ್ ಎಸ್ ಎಲ್ ಸಿ ಪರೀಕ್ಷೆ-2 ಯಾವುದೇ ಅಕ್ರಮಗಳಿಗೆ ಎಡೆಮಾಡಿಕೊಡದೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಇ ಬಾಲಕೃಷ್ಣಪ್ಪ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.
ದ್ವಿತೀಯ ಹಂತದ ಪರೀಕ್ಷೆಯು ಇದೇ ಮೇ 18 ರಿಂದ 25ರ ವರೆಗೆ ಜರುಗಲಿದೆ. ಜಿಲ್ಲೆಯ 5 ತಾಲೂಕುಗಳಿಂದ 2,266 ವಿದ್ಯಾರ್ಥಿಗಳು ನೋಂದಾಯಿಸಿಕೊAಡಿದ್ದಾರೆ. ದ್ವಿತೀಯ ಹಂತದ ಪರೀಕ್ಷೆಗಾಗಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ 3, ಹಗರಿಬೊಮ್ಮನಹಳ್ಳಿ, ಹಡಗಲಿ, ಹರಪನಹಳ್ಳಿ ಹಾಗೂ ಕೂಡ್ಲಿಗಿ ತಾಲೂಕಿನಲ್ಲಿ ತಲಾ ಒಂದು ಪರೀಕ್ಷಾ ಕೇಂದ್ರ ಸೇರಿ ಒಟ್ಟು 7 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದ ಒಳಗೆ ಮತ್ತು ಹೊರಗೆ ಸೂಕ್ತ ಭದ್ರತೆ ಕಲ್ಪಿಸಬೇಕು.
ಪರೀಕ್ಷಾ ಅಕ್ರಮಗಳಿಗೆ ಆಸ್ಪದ ನೀಡದಂತೆ ಪ್ರತಿ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಬೇಕು. ಪರೀಕ್ಷೆ ನಡೆಯುವ ಸಮಯದಲ್ಲಿ ಕೇಂದ್ರದ ಸುತ್ತಮುತ್ತಲಿನ ಎಲ್ಲಾ ಜೆರಾಕ್ಸ್, ಸೈಬರ್ ಕೇಂದ್ರ ಕಡ್ಡಾಯವಾಗಿ ಮುಚ್ಚಬೇಕು. ನಿಯಮ ಮೀರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಲಾಗಿದೆ.
ಪ್ರತಿ ಪರೀಕ್ಷಾ ಕೊಠಡಿಯೂ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿ ಇರಲಿದ್ದು, ಡಿಜಿಟಲ್ ಲೋಪಗಳಿಗೆ ಅವಕಾಶವಿಲ್ಲದಂತೆ ಎಚ್ಚರವಹಿಸಬೇಕು. ಪರೀಕ್ಷೆ ಮುಗಿದ ನಂತರ ಪ್ರಶ್ನೆ ಪತ್ರಿಕೆ ಸುರಕ್ಷಿತವಾಗಿ ಸಾಗಿಸಲು 5 ಮಾರ್ಗ ವ್ಯವಸ್ಥೆ ಮಾಡಲಾಗಿದೆ. ಅದಕ್ಕಾಗಿ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಕಲ್ಪಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಕೇವಲ ಭದ್ರತೆಯಷ್ಟೇ ಅಲ್ಲದೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದಲೂ ಗಾಳಿ, ಬೆಳಕು ಮತ್ತು ಶೌಚಗೃಹ ಸೌಲಭ್ಯಗಳಲ್ಲಿ ಯಾವುದೇ ಕೊರತೆಯಾಗದಂತೆ ಅಗತ್ಯ ಕ್ರಮವಹಿಸಬೇಕು. ಬೇಸಿಗೆಯ ಹಿನ್ನೆಲೆಯಲ್ಲಿ ಪ್ರತಿ ಕೇಂದ್ರದಲ್ಲಿ ಶುದ್ಧ ಕುಡಿವ ನೀರು ಮತ್ತು ತುರ್ತು ಚಿಕಿತ್ಸೆಗಾಗಿ ಆರೋಗ್ಯ ಸಹಾಯಕಿಯರ ತಂಡ ನಿಯೋಜಿಸಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದ ಅವರು, ಒಟ್ಟಾರೆಯಾಗಿ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ 2ನ್ನು ಅತ್ಯಂತ ಶಿಸ್ತುಬದ್ಧವಾಗಿ ಮತ್ತು ದೋಷಮುಕ್ತವಾಗಿ ನಡೆಸಿ ಯಶಸ್ವಿಗೊಳಿಸಿ ಎಂದರು.