ಹೊಸಪೇಟೆ ಚಿತ್ತವಾಡಿಗಿ ಈಶ್ವರ ದೇಗುಲದ ಬಳಿ ಬಾಲಕರ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಕಾಮಗಾರಿಗೆ ಶಾಸಕ ಎಚ್.ಆರ್.ಗವಿಯಪ್ಪ ಭೂಮಿಪೂಜೆ ನೆರವೇರಿಸಿದರು. ಜಿಲ್ಲಾ ಅಧಿಕಾರಿ ಶಶಿಕಲಾ, ತಾಲೂಕು ಅಧಿಕಾರಿ ಸುರೇಶ್, ಪ್ರಮುಖರಾದ ಬಣ್ಣದ ಮನೆ ಸೋಮಶೇಖರ್, ಫಕಿರಪ್ಪ ಇತರರಿದ್ದರು  
ವಿಜಯನಗರ

ಗುಣಮಟ್ಟದ ಕಾಮಗಾರಿ ನಡೆಯಲಿ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಚ್.ಆರ್.ಗವಿಯಪ್ಪ ಅವರಿಂದ ಭೂಮಿ ಪೂಜೆ
ಹೊಸಪೇಟೆ: ನಗರದ ಚಿತ್ತವಾಡಿಗಿ ಈಶ್ವರ ದೇಗುಲದ ಬಳಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕರ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ನೂತನ ಕಟ್ಟಡದ ಅಡಿಗಲ್ಲು ಸಮಾರಂಭದಲ್ಲಿ ಶಾಸಕ ಎಚ್.ಆರ್.ಗವಿಯಪ್ಪ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕೆಕೆಆರ್ ಡಿಬಿಯಿಂದವ ಮೂರು ಕೋಟಿ ರೂ.ವೆಚ್ಚದಲ್ಲಿ ನೂತನ ವಸತಿ ನಿಲಯ ನಿರ್ಮಿಸಲಾಗುತ್ತಿದೆ. ಇದರಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಗೂ ಸಮುದಾಯದ ಶಿಕ್ಷಣ ಪ್ರೇಮಿಗಳ ಬಹುದಿನಗಳ ಕನಸು ಈಡೇರಿದಂತಾಗಿದೆ. ಉತ್ತಮ ವಾತಾವರಣದಲ್ಲಿ ನಿಲಯ ನಿರ್ಮಿಸಲಾಗುತ್ತಿದ್ದು, ಇದು ಗ್ರಾಮೀಣ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಲಿದೆ. ಕಾಮಗಾರಿಯನ್ನು ಗುಣಮಟ್ಟ ಹಾಗೂ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.