ಕಿಚಡಿ ಕೊಟ್ರೇಶ್ 
ವಿಜಯನಗರ

ಮೊಜು ಮಸ್ತಿಯ ಅಧೀವೇಶ ಆಗದಿರಲಿ

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಬಿಜೆಪಿ ಯುವಮೊರ್ಚಾ ಅಧ್ಯಕ್ಷ ಕಿಚಡಿ ಕೊಟ್ರೇಶ್ ಪತ್ರಿಕಾ ಪ್ರಕಟಣೆ ಹೇಳಿಕೆ
ಹೊಸಪೇಟೆ: ರಾಜ್ಯ ಸರ್ಕಾರ ಕಾಟಾಚಾರಕ್ಕೆ ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿ ಅಧಿವೇಶನ ನಡೆಸುತ್ತಿದೆ. ಕನಿಷ್ಠ 20 ದಿನಗಳ ಕಾಲ ಅಧಿವೇಶನ ನಡೆಸಬೇಕು ಎಂದು ಜಿಲ್ಲಾ ಬಿಜೆಪಿ ಯುವಮೊರ್ಚಾ ಅಧ್ಯಕ್ಷ ಕಿಚಡಿ ಕೊಟ್ರೇಶ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಬೆಂಗಳೂರಿನ ವಿಚಾರಗಳನ್ನೇ ಬೆಳಗಾವಿಯಲ್ಲಿ ಕೈಗೆತ್ತಿಕೊಳ್ಳುವುದಾದರೆ ಉತ್ತರ ಕರ್ನಾಟಕದಲ್ಲಿ ಅಧಿವೇಶನ ನಡೆಸುವ ಔಚಿತ್ಯ ಏನು? ಹಿಂದೆ ಕುಮಾರಸ್ವಾಮಿ, ಯಡಿಯೂರಪ್ಪ ಅವರಿದ್ದಾಗ ಅಲ್ಲೊಂದು ಭವನ ಆಗಬೇಕು, ಉತ್ತರ ಕರ್ನಾಟಕದ ಚರ್ಚೆ ಆಗಬೇಕೆಂದು ಅಧಿವೇಶನ ಮಾಡುತ್ತಿದ್ದರು. 20 ದಿನವಾದರೂ ಬೆಳಗಾವಿಯಲ್ಲಿ ಅಧಿವೇಶನ ನಡೆಸಿ, ಇಲ್ಲಿನ ಸಮಸ್ಯೆಗಳನ್ನು ಚರ್ಚಿಸಿ ಎಂದು ಆಗ್ರಹಿಸಿದರು.
ಜನರಿಗೆ ನೀಡಿದ ಭರವಸೆಗೆ ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ನಡೆಯುತ್ತಿದೆ. ಇದು ಶೇ.60 ಕಮಿಷನ್ ಸರ್ಕಾರವಾಗಿ ಮಾರ್ಪಟ್ಟಿದೆ. ಕರ್ನಾಟಕವನ್ನು ಎಟಿಎಂ ಮಾಡಿಕೊಂಡು ಕಾಂಗ್ರೆಸ್ ನ ಕೇಂದ್ರ ಹೈಕಮಾಂಡಿಗೆ ಹಣ ಕಳಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮೊದಲ ದಿನದಿಂದ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳನ್ನೇ ಪ್ರಮುಖವಾಗಿ ತೆಗೆದುಕೊಳ್ಳಬೇಕು ಬೆಳಗಾವಿ, ಯಾದಗಿರಿ, ಕಲ್ಬುರ್ಗಿ, ಬೀದರ್, ಬಾಗಲಕೋಟೆ, ಬಿಜಾಪುರ, ರಾಯಚೂರಿನಲ್ಲಿ ಪ್ರವಾಹ ಪರಿಸ್ಥಿತಿ ಇತ್ತು. ಸರ್ಕಾರ ಈ ವಿಷಯದಲ್ಲಿ ಮೂರ್ನಾಲ್ಕು ತಿಂಗಳಾದ ಬಳಿಕ ನಿದ್ದೆಯಿಂದ ಎದ್ದೇಳುತ್ತಿದೆ.
ಬೆಳಗಾವಿ ನೆರೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಶಾಸಕರ ಭವನ ನಿರ್ಮಾಣದಂತಹ ಮಹತ್ತರ ಕಾರ್ಯಗಳಿಗೆ ಅಧಿವೇಶನ ಸಾಕ್ಷಿಯಾಗಲಿ ಕೇವಲ ಕಾಟಾಚಾರಕ್ಕೆ ಅಧಿವೇಶನ ಆಗದೆ ಕನಿಷ್ಠ 20ದಿನ ನಡೆಸುವ ನಿರ್ಧಾರಕ್ಕೆ ಸರ್ಕಾರ ಬರಬೇಕು. ಇಲ್ಲದಿದ್ದರೆ ಇದೊಂದು ಪ್ರವಾಸದ ಮೊಜು ಮಸ್ತಿಯ ಅಧೀವೇಶಕ್ಕೆ ಸೀಮಿತವಾಗಲಿದೆ ಎಂದರು.