ಹೊಸಪೇಟೆಯಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಿಜಶರಣ ಅಂಬಿಗರ ಚೌಡಯ್ಯ ನವರ ಜಯಂತೋತ್ಸವ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣಪ್ಪ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಸಿದ್ದಲಿಂಗೇಶ ರಂಗಣ್ಣನವರ್, ಪ್ರಮುಖರಾದ ನಾಗರಾಜ, ವೈ.ಯಮುನೇಶ್, ಎಸ್.ಗಾಳೆಪ್ಪ, ನಾಗರಾಜ ಇತರರಿದ್ದರು.‌ 
ವಿಜಯನಗರ

ಸಮ ಸಮಾಜ ನಿರ್ಮಾಣವಾಗಲಿ

ಪ್ರಮುಖ ಮುಖ್ಯಾಂಶಗಳು

  • ಅಂಬಿಗರ ಚೌಡಯ್ಯ ಜಯಂತಿಯಲ್ಲಿ ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣಪ್ಪ ಸಲಹೆ
ಹೊಸಪೇಟೆ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ನವರ 906ನೇ ಜಯಂತೋತ್ಸವ ಬುಧವಾರ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣಪ್ಪ ಮಾತನಾಡಿ, ಚೌಡಯ್ಯನವರು ಶಿವಶರಣ ಹಾಗೂ ವಚನಕಾರರು ಉಳಿದೆಲ್ಲಾ ವಚನಕಾರರಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ ಪ್ರವೃತ್ತಿಯಲ್ಲಿ ಅನುಭಾವಿ. ನೇರ ನಿರ್ಭೀತ ನುಡಿಗಳಿಂದ ವಚನಗಳನ್ನು ಬರೆದಿದ್ದಾರೆ. ಚೌಡಯ್ಯನವರಲ್ಲಿ ಬಸವಣ್ಣನವರ ವೈಚಾರಿಕತೆ, ಅಲ್ಲಮಪ್ರಭುವಿನ ಅನುಭಾವಿಕ ನಿಲುವು, ಬೆರೆತು ವಿಶಿಷ್ಟ ಅನುಭವ ಮತ್ತು ಅನುಭಾವಗಳೆರಡು ಇವೆ. ಆ ಮೂಲಕ ಸಮ ಸಮಾಜ ನಿರ್ಮಾಣವಾಗಬೇಕು ಎಂದರು.
ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಸಿದ್ದಲಿಂಗೇಶ ರಂಗಣ್ಣನವರ್, ಪ್ರಮುಖರಾದ ನಾಗರಾಜ, ವೈ.ಯಮುನೇಶ್, ಎಸ್.ಗಾಳೆಪ್ಪ, ನಾಗರಾಜ ಇತರರಿದ್ದರು.