ಹೊಸಪೇಟೆ ಗಾಂಧಿ ಚೌಕ್‌ನಲ್ಲಿ 37ನೇ ರಾಷ್ಟೀಯ ರಸ್ತೆ ಸುರಕ್ಷತಾ ಮಾಸಾಚರಣೆ ನಿಮಿತ್ತ ಕಾಲ್ನಡಿಗೆ ಜಾಥಕ್ಕೆ ಶನಿವಾರ ನ್ಯಾಯಾಧೀಶ ಕೆ.ಎಂ.ರಾಜಶೇಖರ್ ಚಾಲನೆ ನೀಡಿದರು. ನ್ಯಾಯಾಧೀಶರಾದ ಡಿ.ಪಿ.ಕುಮಾರ ಸ್ವಾಮಿ, ಸುಬ್ರಮಣ್ಯ ಎನ್., ರೂಪ ಕೆ., ಪ್ರಶಾಂತ್ ನಾಗಲಾಪುರ್, ಶೃತಿ ತೇಲಿ, ಎಎಸ್ಪಿ ಟಿ.ಮಂಜುನಾಥ, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರಪ್ಪ ದೊಂಬರ್ ಮತ್ತೂರು, ನಗರಸಭೆ ಪೌರಾಯುಕ್ತರಾದ ಶಿವಕುಮಾರ್, ವಕೀಲರ ಸಂಘದ ಅಧ್ಯಕ್ಷ ಕೆ.ಪ್ರಹ್ಲಾದ್ ಇತರರಿದ್ದರು. 
ವಿಜಯನಗರ

ಅಪಘಾತ ರಹಿತ ಜಿಲ್ಲೆಯನ್ನಾಗಿಸೋಣ

ಮಂಜುನಾಥ

ಪ್ರಮುಖ ಮುಖ್ಯಾಂಶಗಳು

  • ರಸ್ತೆ ಸುರಕ್ಷತಾ ಮಾಸಾಚರಣೆ ಜಾಥದಲ್ಲಿ ನ್ಯಾಯಾಧೀಶ ಕೆ.ಎಂ.ರಾಜಶೇಖರ್ ಸಲಹೆ
ಹೊಸಪೇಟೆ: ಸಂಚಾರಿ ನಿಯಮಗಳ ಪಾಲನೆಗಳನ್ನು ಉಲ್ಲಂಘನೆ ಮಾಡುವುದರಿಂದ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಆದ್ದರಿಂದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸೇರಿ ರಸ್ತೆ ಅಪಘಾತ ತಡೆಗಟ್ಟಲು ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಿ ಅಪಘಾತ ರಹಿತ ಜಿಲ್ಲೆಯನ್ನಾಗಿ ಮಾಡೋಣ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಂ.ರಾಜಶೇಖರ್ ಹೇಳಿದರು.
37ನೇ ರಾಷ್ಟೀಯ ರಸ್ತೆ ಸುರಕ್ಷತಾ ಮಾಸಾಚರಣೆ ನಿಮಿತ್ತ ತಾಲೂಕು ಕಾನೂನು ಸೇವಾ ಸಮಿತಿ, ಜಿಲ್ಲಾ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸೇರಿದಂತೆ ಇತರೆ ಇಲಾಖೆಗಳ ಸಹಯೋಗದಲ್ಲಿ ಕಾಲ್ನಡಿಗೆ ಜಾಥಕ್ಕೆ ಚಾಲನೆ ನೀಡಿ ಶನಿವಾರ ಮಾತನಾಡಿದರು.
ಕಾನೂನು ನಿಯಮ ಪಾಲನೆ ಮಾಡಿ ಮತ್ತು ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕಿದೆ. ಈ ವರ್ಷವಾದರೂ ಅಪಘಾತ ರಹಿತ ವರ್ಷವನ್ನಾಗಿ ಮಾಡುವ ಸಲುವಾಗಿ ರಸ್ತೆ ಮಾಸಾಚರಣೆ ಹಮ್ಮಿಕೊಳ್ಳಲಾಗಿದೆ. ವಾಹನಗಳ ಸಂಖ್ಯೆ ಮೀತಿ ಮೀರುತ್ತಿದ್ದು, ವಾಹನಗಳ ಸಂಖ್ಯೆ ಹೆಚ್ಚಾದಂತೆ ಅಪಘಾತಗಳ ಸಂಖ್ಯೆ ಸಹ ಹೆಚ್ಚಾಗುತ್ತಿವೆ ಎಂದು ಹೇಳಿದರು.
18 ವರ್ಷದೊಳಗಿನ ಮಕ್ಕಳು ವಾಹನ ಚಲಾಯಿಸಿದರೆ ಅವರ ಪೋಷಕರಿಗೆ 25 ಸಾವಿರ ರೂ. ದಂಡವನ್ನು ವಿಧಿಸಲಾಗುತ್ತದೆ. ಒಂದು ವೇಳೆ ಅಪಘಾತದಲ್ಲಿ ಕೂಲಿ ಕಾರ್ಮಿಕರು ಮೃತ ಪಟ್ಟರೆ ಮತ್ತು ಗಾಯಗೊಂಡರೆ ಕಾನೂನು ಬದ್ಧವಾಗಿ 10 ಲಕ್ಷಕ್ಕೂ ಹೆಚ್ಚು ಪರಿಹಾರ ಸಿಗುವ ಅವಕಾಶವಿದ್ದರೂ, ನಿಯಮ ಪಾಲನೆ ಮಾಡಿ ಜೀವ ಉಳಿಸಲು ಮೊದಲ ಆದ್ಯತೆ ನೀಡಿ ಎಂದರು.