ಕಂಪ್ಲಿಯಲ್ಲಿ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹಾಗೂ ಉತ್ತಮ ಶಿಕ್ಷಕರನ್ನು ಸನ್ಮಾನಿಸಲಾಯಿತು. ಪ್ರಮುಖರಾದ ಷಣ್ಮುಖಪ್ಪ ಚಿತ್ರಗಾರ್, ಪಿ.ನಾಗೇಶ್ವರರಾವ್, ದೊಡ್ಡಬಸಪ್ಪ, ಅಯ್ಯೋದಿ ವೆಂಕಟೇಶ ಇತರರಿದ್ದರು.
- ದತ್ತಿ ಉಪನ್ಯಾಸ ಕಾರ್ಯಕ್ರಮ
- ನವಭಾರತ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ.ನಾಗೇಶ್ವರರಾವ್ ಹೇಳಿಕೆ
ಕಂಪ್ಲಿ: ವಿದ್ಯಾರ್ಥಿದೆಸೆಯಲ್ಲೇ ಸಾಹಿತ್ಯ ಆಸಕ್ತಿ ಬೆಳೆಸಿಕೊಂಡರೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಎಂದು ನವಭಾರತ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ.ನಾಗೇಶ್ವರರಾವ್ ಹೇಳಿದರು.
ತಾಲೂಕು ಕಸಾಪಯಿಂದ ವಿದ್ಯಾಸಾಗರ ಇಂಟರ್‌ನ್ಯಾಷನಲ್ ಸ್ಕೂಲ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಹಿತ್ಯ ಜೀವನ ಮುನ್ನಡೆಸಲು ಪ್ರೇರಣೆ, ಧೈರ್ಯ, ಬಲ ಒದಗಿಸುತ್ತದೆ ಎಂದರು. ಶಿಕ್ಷಕ ದೊಡ್ಡಬಸಪ್ಪ ಮಾತನಾಡಿ, ಪಂಪನ ಸಾಹಿತ್ಯ ಲೌಕಿಕ, ಧಾರ್ಮಿಕ ಮೌಲ್ಯಗಳನ್ನು ಸಮನ್ವಯಗೊಳಿಸುವ ಮೂಲಕ ಆಧ್ಯಾತ್ಮಿಕ ಮಾರ್ಗವನ್ನು ಬೋಧಿಸುತ್ತದೆ. ಜನಪದ ಸಾಹಿತ್ಯವು ಬದುಕಿನ ರೀತಿ, ನೀತಿಗಳನ್ನು ಸಾರಿ ವೈಚಾರಿಕ ಪ್ರಜ್ಞೆ ಮೂಡಿಸುವಲ್ಲಿ ಸಹಕಾರಿಯಾಗಿದೆ ಎಂದರು. ಪ್ರತಿಭಾನ್ವಿತ ವಿದ್ಯಾರ್ಥಿಗಳು, ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ತಾಲೂಕು ಕಸಾಪ ಅಧ್ಯಕ್ಷ ಷಣ್ಮುಖಪ್ಪ ಚಿತ್ರಗಾರ್, ಪುರಸಭೆ ಮಾಜಿ ಅಧ್ಯಕ್ಷ ಅಯ್ಯೋದಿ ವೆಂಕಟೇಶ, ಪ್ರಮುಖರಾದ ಎಸ್.ಡಿ.ಬಸವರಾಜ, ಎಸ್.ಶಾಮಸುಂದರರಾವ್, ಎಲಿಗಾರ ವೆಂಕಟರೆಡ್ಡಿ, ಅಶೋಕ ಕುಕನೂರು, ಹಾದಿಮನಿ ಕಾಳಿಂಗವರ್ಧನ, ಬಂಗಿ ದೊಡ್ಡ ಮಂಜುನಾಥ ಇತರರಿದ್ದರು.