ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಕಳ್ಳಭಟ್ಟಿ ನಿರ್ಮೂಲನೆ ಕುರಿತ ಸ್ಥಾಯಿ ಸಮಿತಿ ಸಭೆ ನಡೆಸಿದರು. ಅಬಕಾರಿ ಉಪ ಆಯುಕ್ತ ಡಾ.ಮಾದೇಶ್, ಎಎಸ್ಪಿ ಮಂಜುನಾಥ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಿಯಾಧಿಕಾರಿ ವಿವೇಕಾನಂದ ಇತರರಿದ್ದರು. 
ವಿಜಯನಗರ

ಕಳ್ಳಭಟ್ಟಿ ಮುಕ್ತ ಜಿಲ್ಲೆಯಾಗಿಸಿ

ಮಂಜುನಾಥ

ಪ್ರಮುಖ ಮುಖ್ಯಾಂಶಗಳು

  • ಕಳ್ಳಭಟ್ಟಿ ನಿರ್ಮೂಲನೆ ಸ್ಥಾಯಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಸೂಚನೆ
ಹೊಸಪೇಟೆ: ಜಿಲ್ಲೆಯಲ್ಲಿ ಕಳ್ಳಬಟ್ಟಿ ಸಾರಾಯಿ ತಯಾರಿಕೆ, ಅಕ್ರಮ ಮದ್ಯ ಮಾರಾಟ ಮತ್ತು ಸಾಗಣೆಯನ್ನು ಸಂಪೂರ್ಣವಾಗಿ ನಿಯಂತ್ರಿಸಿ ಕಳ್ಳಬಟ್ಟಿ ಮುಕ್ತ ಜಿಲ್ಲೆಯಾಗಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಳ್ಳಭಟ್ಟಿ ನಿರ್ಮೂಲನೆ ಕುರಿತ ಆಯೋಜಿಸಲಾಗಿದ್ದ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳ್ಳಭಟ್ಟಿ ತಯಾರಿಕೆ ಮತ್ತು ಅಕ್ರಮ ಮದ್ಯದ ವಹಿವಾಟಿನ ವಿರುದ್ಧ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಗಡಿ ಭಾಗದ ಚೆಕ್ ಪೋಸ್ಟ್ಳಲ್ಲಿ ತಪಾಸಣೆ ತೀವ್ರಗೊಳಿಸಬೇಕು. ಸಂಶಯಾಸ್ಪದ ಸ್ಥಳಗಳ ಮೇಲೆ ನಿರಂತರವಾಗಿ ದಾಳಿ ನಡೆಸಬೇಕು. ಅಕ್ರಮ ಮದ್ಯ ಮಾರಾಟದ ಮೇಲೆ ಹೆಚ್ಚಿನ ಕಾರ್ಯಾಚರಣೆ ನಡೆಸಬೇಕು ಎಂದರು.
ಅಬಕಾರಿ ಉಪ ಆಯುಕ್ತ ಡಾ.ಮಾದೇಶ್ ಮಾತನಾಡಿ, ಜಿಲ್ಲೆಯಲ್ಲಿ ಪರವಾನಗಿ ಪಡೆದ 160 ಮದ್ಯದಂಗಡಿಗಳಿವೆ. ಕಳ್ಳಭಟ್ಟಿ ಸಾರಾಯಿ ನಿರ್ಮೂಲನೆ, ಅಕ್ರಮ ಮದ್ಯ ಮಾರಾಟ ಮತ್ತು ಸಾಗಣೆ ಕುರಿತು ಗ್ರಾಮ ಸಭೆ, ಜಾಗೃತಿ ಕಾರ್ಯಗಾರ ಆಯೋಜಿಸಲಾಗಿದೆ. 2010 ರಿಂದ ಈ ವರೆಗೆ ಪ್ರಕರಣಗಳು ದಾಖಲಾಗಿಲ್ಲ. ಆದರೆ, ನೆರೆ ರಾಜ್ಯಗಳಿಂದ ಸಾಗಾಟ ಮಾಡುತ್ತಿದ್ದವರ ವಿರುದ್ಧ 2023 ರಿಂದ 2026ರ ಫೆಬ್ರವರಿ ಅಂತ್ಯಕ್ಕೆ 7 ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ 2024 ಜುಲೈ ನಿಂದ 2025ರ ಜೂನ್ ವರೆಗೆ 892 ಕಡೆ ಹಾಗೂ 2025ರ ಜುಲೈ ನಿಂದ ಫೆಬ್ರವರಿ 16ರವರೆಗೆ 872 ಸೇರಿ ಒಟ್ಟು 1764 ಕಡೆ ದಾಳಿ ನಡೆಸಿ 755 ಲೀಟರ್ ಮದ್ಯ ಮತ್ತು 152ಲೀ ಬಿಯರ್ ವಶಪಡಿಸಿಕೊಳ್ಳಲಾಗಿದೆ ಎಂದರು.