ಕೂಡ್ಲಿಗಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡವನ್ನು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಉದ್ಘಾಟಿಸಿದರು.
ಕೂಡ್ಲಿಗಿ: ಶಿಕ್ಷಣ ಸುಶಿಕ್ಷಿತ ಸಮಾಜದ ನಿರ್ಮಾಣಕ್ಕೆ ಅತ್ಯಂತ ಪ್ರಬಲ ಸಾಧನವಾಗಿದೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.
ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದ ಪ್ರತಿಯೊಬ್ಬ ವಿದ್ಯಾರ್ಥಿನಿ ಉತ್ತಮ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಎರಡು ಕೋಟಿ ರೂ. ವೆಚ್ಚದಲ್ಲಿ ವಸತಿ ನಿಲಯ ನಿರ್ಮಿಸಲಾಗಿದೆ. ಈ ಮೂಲಕ ಗ್ರಾಮೀಣ ಭಾಗದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಬೇಕೆಂದು ಸಲಹೆ ನೀಡಿದರು.
ಸುರಕ್ಷಿತ ವಸತಿ, ಉತ್ತಮ ಕಲಿಕಾ ವಾತಾವರಣ ಮತ್ತು ಉನ್ನತ ಶಿಕ್ಷಣದ ಅವಕಾಶಗಳನ್ನು ಒದಗಿಸುವ ಮೂಲಕ ವಿದ್ಯಾರ್ಥಿನಿಯರ ಕನಸುಗಳಿಗೆ ಹೊಸ ದಾರಿ ತೆರೆಯಲಾಗಿದೆ. ಶಿಕ್ಷಣಕ್ಕೆ ಆದ್ಯತೆ ನೀಡಿ, ಭವಿಷ್ಯದ ಪೀಳಿಗೆಯನ್ನು ಸದೃಢಗೊಳಿಸುವ ಸಂಕಲ್ಪದೊಂದಿಗೆ ಕೂಡ್ಲಿಗಿ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಅಭಿವೃದ್ಧಿ ಕಾರ್ಯ ಸಾಕಾರಗೊಂಡಿದೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ್ ದಿಗಡೂರು, ಕಚೇರಿ ಮೇಲ್ವಿಚಾರಕ ಪಕ್ಕೀರಪ್ಪ, ಪ್ರಮುಖರಾದ ಕಾವಲಿ ಶಿವಪ್ಪನಾಯಕ, ಉದಯ ಜನ್ನು, ಪ್ರಭಾಕರ, ಸಿ.ಬಿ.ಜಯರಾಂ ನಾಯಕ, ಎಸ್.ಸುರೇಶ್, ಎರಿಸ್ವಾಮಿ, ಬಣಕಾರ ವೀರಭದ್ರಪ್ಪ, ಅಂಜಿ ಬಯ್ಯ, ಬಿ.ಕೆ.ರಾಘವೇಂದ್ರ ಇತರರಿದ್ದರು.