ಕುರುಗೋಡು ಅಂಬೇಡ್ಕರ್ ಕಾಲನಿಯಲ್ಲಿ ಪೈಪ್‌ಲೈನ್ ಅಳವಡಿಕೆಗೆ ಅಗೆದಿರುವ ನೆಲವನ್ನು ಅರೆಬರೆ ಮುಚ್ಚಿರುವುದು. 
ವಿಜಯನಗರ

ಕಾಮಗಾರಿ ಶೀಘ್ರ ಪೂರ್ಣಗೊಳಿಸಲಿ

ರುದ್ರಪ್ಪ ವಾಲಿ

ಪ್ರಮುಖ ಮುಖ್ಯಾಂಶಗಳು

  • ಜನರು
  • ಮೂಗು
  • ಮುಚ್ಚಿಕೊಂಡು
ಕುರುಗೋಡು: ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಮನೆಗಳಿಗೆ ನಳ ಸಂಪರ್ಕ ಕಲ್ಪಿಸಲು ಮುಖ್ಯ ಕೊಳವೆ ಮಾರ್ಗ ಅಳವಡಿಕೆ ಕಾಮಗಾರಿ ಆಮೆಗತಿಯಲ್ಲಿ ಸಾಗಿದ್ದು ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದೆ.
ಕೊಳವೆ ಅಳವಡಿಸಲು ಅಗೆದ ನೆಲವನ್ನು ಸಮರ್ಪಕವಾಗಿ ಮುಚ್ಚದೆ ಅರೆಬರೆ ಮಾಡಿದ್ದರಿಂದ ಚರಂಡಿಯಲ್ಲಿ ಮಣ್ಣು ಶೇಖರಣೆಯಾಗಿ ಕಲುಷಿತ ನೀರು ರಸ್ತೆಯ ಮೇಲೆ ಹರಿಯುತ್ತಿದೆ.
ಇದರಿಂದಾಗಿ ದುರ್ವಾಸನೆ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದಲ್ಲಿ ಮಾರ್ಚ್ ಮೊದಲ ವಾರದಲ್ಲಿ ದೊಡ್ಡಬಸವೇಶ್ವರ ಮಹಾರಥೋತ್ಸವ ಜರುಗಲಿದ್ದು, ಲಕ್ಷಾಂತರ ಭಕ್ತರು ಸೇರುತ್ತಾರೆ. ಭಕ್ತರಿಗೆ ತೊಂದರೆಯಾಗದಂತೆ ಕೊಳವೆ ಅಳವಡಿಕೆ ಕಾಮಗಾರಿ ಪೂರ್ಣಗೊಳಿಸಬೇಕು. ತಗ್ಗುಗಳನ್ನು ಸಮರ್ಪಕವಾಗಿ ಮುಚ್ಚಬೇಕು ಎಂದು ಗ್ರಾಮಸ್ಥರಾದ ಬಸವರಾಜ, ಕೆಂಚಪ್ಪ, ನೀಲಕಂಠ ಒತ್ತಾಯಿಸಿದ್ದಾರೆ.
"

ಪಟ್ಟಣದಲ್ಲಿ ಕುಡಿಯುವ ನೀರು ಸರಬರಾಜು ಕೊಳವೆ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಕಾಮಗಾರಿಗೆ ವೇಗ ನೀಡಬೇಕು ಮತ್ತು ಗುಂಡಿಗಳನ್ನು ಸಮರ್ಪಕವಾಗಿ ಮುಚ್ಚುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ.