ಹೊಸಪೇಟೆ ಶ್ರೀ ಸಣ್ಣಕ್ಕಿ ವೀರಭದ್ರೇಶ್ವರ ದೇಗುಲದ ಮುಂದೆ ಬಿಜೆಪಿ ಮಂಡಲದಿAದ ಪ್ರಧಾನಿ ನರೇಂದ್ರ ಮೋದಿ ಅವರ ಸುದೀರ್ಘ ಸೇವೆ ಸಂಭ್ರಮಾಚರಣೆ ನಡೆಯಿತು. ವೀರಶೈವ ಲಿಂಗಾಯತ ಸಂಘದ ಅಧ್ಯಕ್ಷ ಗೊಗ್ಗ ಚೆನ್ನಬಸವರಾಜು, ಬಿಜೆಪಿ ಮಂಡಲ ಅಧ್ಯಕ್ಷ ಶಂಕರ್ ಮೇಟಿ, ಮಾಜಿ ಹುಡಾ ಅಧ್ಯಕ್ಷರಾದ ಅಶೋಕ್ ಜೀರೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಉಮಾದೇವಿ, ಪ್ರಮುಖರಾದ ಕವಿತಾ ಆನಂದ್, ಅರ್ಪಿತ ಗೌಡ, ಇಮ್ತಿಯಾಜ್, ತಿರುಮಲೇಶ್ ಇತರರಿದ್ದರು.
- ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್.ರಾಘವೇಂದ್ರ ಹೇಳಿಕೆ
ಹೊಸಪೇಟೆ: ಪ್ರಧಾನಿ ನರೇಂದ್ರ ಮೋದಿ ಅವರ ಸುದೀರ್ಘ ಸೇವೆ ಹಿನ್ನೆಲೆಯಲ್ಲಿ ಸ್ಥಳೀಯ ನೆಹರು ಕಾಲೋನಿಯ ಶ್ರೀ ಸಣ್ಣಕ್ಕಿ ವೀರಭದ್ರೇಶ್ವರ ದೇಗುಲದಲ್ಲಿ ಬಿಜೆಪಿ ಮಂಡಲದಿAದ ವಿಶೇಷ ಪೂಜೆ ಹಾಗೂ ಸಂಭ್ರಮಾಚರಣೆ ನಡೆಯಿತು.
ಜೂನ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸತತ 4,399 ದಿನಗಳ ಪ್ರಧಾನಿತ್ವ ಪೂರ್ಣಗೊಳಿಸುವ ಮೂಲಕ, ಕಾಂಗ್ರೆಸ್‌ನ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 4,398 ದಿನಗಳ (ಸತತ ಆಡಳಿತದ) ದಾಖಲೆಯನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ಮೋದಿ ಅವರು ಭಾರತದ ಇತಿಹಾಸದಲ್ಲೇ ಸತತವಾಗಿ ಅತಿ ದೀರ್ಘಾವಧಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಐತಿಹಾಸಿಕ ದಿನದ ಅಂಗವಾಗಿ ದೇವರಿಗೆ ವಿಶೇಷ ಅರ್ಚನೆ ಸಲ್ಲಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್.ರಾಘವೇಂದ್ರ ಮಾತನಾಡಿ, ಪ್ರಧಾನಿ ಮೋದಿ ಅವರು ದೇಶದ ಹತ್ತಾರು ಸವಾಲುಗಳನ್ನು ಸಮರ್ಥವಾಗಿ ಎದುರಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿದ್ದು, ಡಿಜಿಟಲ್ ಕ್ರಾಂತಿ, ಮೇಕ್ ಇನ್ ಇಂಡಿಯಾ, ಆಯುಷ್ಮಾನ್ ಭಾರತ್ ಆರೋಗ್ಯ ವಿಮೆ ಹಾಗೂ ಮುದ್ರಾ ಯೋಜನೆಗಳ ಮೂಲಕ ದೇಶದ ಮೂಲಸೌಕರ್ಯ ಮತ್ತು ಕೈಗಾರಿಕಾ ವಲಯವನ್ನು ಬಲಪಡಿಸಿದ್ದಾರೆ. ಮಹಿಳೆಯರಿಗಾಗಿ ಉಜ್ವಲ ಯೋಜನೆ, ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ ಅಭಿಯಾನಗಳ ಮೂಲಕ ಭಾರತವನ್ನು ವಿಶ್ವದ ಬಲಿಷ್ಠ ಆರ್ಥಿಕತೆಯನ್ನಾಗಿ ರೂಪಿಸಿ, ಜಾಗತಿಕ ಮಟ್ಟದಲ್ಲಿ 'ವಿಶ್ವಗುರು' ಸ್ಥಾನ ತಂದುಕೊಟ್ಟಿದ್ದಾರೆ" ಎಂದು ಶ್ಲಾಘಿಸಿದರು.