ಕೂಡ್ಲಿಗಿ ತಾಲೂಕಿನ ಬಂಡೇಬಸಾಪುರ ತಾಂಡಾದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಚಾಲನೆ ನೀಡಿದರು.  
ವಿಜಯನಗರ

ಗುಳೆ ಹೋಗದಂತೆ ತಡೆಯಲು ಅಗತ್ಯ ಕ್ರಮ

ಅಶೋಕ್ ಕುಮಾರ್ ಎನ್
ಕೂಡ್ಲಿಗಿ: ತಾಲೂಕಿನ ತಾಂಡಾಗಳನ್ನು ಆರ್ಥಿಕ, ಸಾಮಾಜಿಕವಾಗಿ ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗಿದೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.
ಬಂಡೇಬಸಾಪುರ ತಾಂಡಾದಲ್ಲಿ 9.30 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಕ್ಷೇತ್ರ ಬರದ ನಾಡಗಿದ್ದು, ಜನ ಗುಳೆ ಹೋಗುತ್ತಿದ್ದಾರೆ. ಇದನ್ನು ತಪ್ಪಿಸಲು ಶಾಲೆ, ಕಾಲೇಜು, ಆರೋಗ್ಯ ಕೇಂದ್ರಗಳನ್ನು ಸ್ಥಾಪನೆ ಮಾಡುವ ಮೂಲಕ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುವುದು ಎಂದರು.
4.95 ಕೋಟಿ ರೂ. ವೆಚ್ಚದಲ್ಲಿ ಶಿವಪುರದವರೆಗೆ ರಸ್ತೆ ವಿಸ್ತರಣೆ, 1.50 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ, 1.50 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿ, 10 ಲಕ್ಷ ರೂ. ವೆಚ್ಚದಲ್ಲಿ ಚೌಡೇಶ್ವರ ದೇವಸ್ಥಾನ, 4 ಲಕ್ಷ ರೂ. ವೆಚ್ಚದಲ್ಲಿ ಶ್ರೀಕೃಷ್ಣ ದೇವಸ್ಥಾನ ಅಭಿವೃದ್ಧಿ, 1.25 ಕೋಟಿ ರೂ. ವೆಚ್ಚದಲ್ಲಿ ಚೆಕ್ ಡ್ಯಾಂ, ಗೋವಿಂದಗಿರಿ ತಾಂಡಾದಲ್ಲಿ 2.40 ಕೋಟಿ ರೂ. ವೆಚ್ಚದಲ್ಲಿ ಒಳ ಚರಂಡಿ, 2 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ, 2.23 ಲಕ್ಷದಲ್ಲಿ ಶ್ರೀ ಆಂಜನೇಯ ದೇವಸ್ಥಾನ ಅಭಿವೃದ್ಧಿಗೆ ಚಾಲನೆ ನೀಡಿದರು. 16.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿದ ಶಾಲಾ ಕೊಠಡಿ ಉದ್ಘಾಟಿಸಿದರು.
ಲೋಕೋಪಯೋಗಿ ಇಲಾಖೆ ಎಇ ಆಶೋಕ್, ಪ್ರಮುಖರಾದ ದೇವಲ ನಾಯ್ಕ, ತೋತ್ಯಾ ನಾಯ್ಕ, ಈಶ್ವರ ನಾಯ್ಕ, ಲೋಕ್ಯಾ ನಾಯ್ಕ, ಕೃಷ್ಣ ನಾಯ್ಕ, ರತ್ನನಾಯ್ಕ, ಅಮ್ಮಣ್ಣ ನಾಯ್ಕ, ಅಧಿಕಾರಿಗಳು ಇದ್ದರು.